ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ ಫಲಶ್ರುತಿ| ಬಳ್ಳಾರಿಯ ಆಶಾ ಕಾರ್ಯಕರ್ತೆಯರಿಗೆ ಶಾಲೆಯಲ್ಲಿ ಸೌಕರ್ಯ

Last Updated 10 ಏಪ್ರಿಲ್ 2020, 9:41 IST
ಅಕ್ಷರ ಗಾತ್ರ

ಬಳ್ಳಾರಿ: ಕೊರೊನಾ ಸೋಂಕುಳ್ಳವರು ಪತ್ತೆಯಾದ ಬಳಿಕ ನಗರದ ಗುಗ್ಗರಹಟ್ಟಿ ಪ್ರದೇಶದಲ್ಲಿ ಮನೆ ಸಮೀಕ್ಷೆ ನಡೆಸುತ್ತಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಇಲ್ಲಿನ ಸರ್ಕಾರಿ ಶಾಲೆಯಲ್ಲಿ ತಾತ್ಕಾಲಿಕ ಶೌಚಾಲಯ ಸೌಕರ್ಯ ಕಲ್ಪಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜ್ ಶುಕ್ರವಾರ ಗುಗ್ಗರಹಟ್ಟಿ ಪ್ರದೇಶಕ್ಕೆ ಭೇಟಿ ನೀಡಿ ಕಾರ್ಯಕರ್ತೆಯರ ಅಹವಾಲು ಆಲಿಸಿದರು.

ಸರ್ಕಾರಿ ಶಾಲೆಯ ಎರಡು ಕೊಠಡಿ ಹಾಗೂ ಶೌಚಾಲಯಗಳನ್ನು ಬಳಸಬಹುದು ಎಂದು ಅಧಿಕಾರಿ ತಿಳಿಸಿದರೆಂದು ಕಾರ್ಯಕರ್ತೆಯರು ಪ್ರಜಾವಾಣಿಯೊಂದಿಗೆ ಸಂತಸ ಹಂಚಿಕೊಂಡರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ನಿತೀಶ್ ಅವರೂ ಮಧ್ಯಾಹ್ನ ಗುಗ್ಗರಹಟ್ಟಿಗೆ ಭೇಟಿ ನೀಡಿದ್ದರು.

ಕಂಟೈನ್ಮೆಂಟ್ ಪ್ರದೇಶದಲ್ಲಿ ಸಮೀಕ್ಷೆ ಬಳಿಕ ನೇರ ಮನೆಗೆ- ಶೀರ್ಷಿಕೆಯಡಿ ಶುಕ್ರವಾರ ವರದಿ ಪ್ರಕಟವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT