ಬೆಂಗಳೂರು: ‘ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಸುರ್ಜೇವಾಲಾ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಜಂಟಿಯಾಗಿ ಪ್ಲ್ಯಾನ್ ಮಾಡಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದರು.

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಲು ಕಾಂಗ್ರೆಸ್ ಪಕ್ಷವೇ ಕಾರಣ. ಪೆನ್‌ಡ್ರೈವ್ ವಿಚಾರದಲ್ಲಿ ಆ ಬಳಿಕ ಏನು ಮಾಡಬೇಕು ಎಂದು ಸುರ್ಜೇವಾಲಾ ಚಿತ್ರಕಥೆ ಬರೆದಿದ್ದು, ಸಿದ್ದರಾಮಯ್ಯ ನಿರ್ದೇಶನ ಮತ್ತು ಡಿ.ಕೆ.ಶಿವಕುಮಾರ್ ನಿರ್ಮಾಣ ಮಾಡಿದ್ದಾರೆ ಎಂದು ಅಶೋಕ ವ್ಯಂಗ್ಯವಾಡಿದರು.

ಪೆನ್‌ಡ್ರೈವ್ ಬಿಡುಗಡೆಯಲ್ಲಿ ಸರ್ಕಾರದ ಪಾತ್ರವಿದೆ ಎಂದು ಕಾನೂನು ತಜ್ಞರೇ ಹೇಳಿದ್ದಾರೆ. ಆದ್ದರಿಂದ ರಾಜ್ಯಪಾಲರು ಕೂಡಲೇ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ವೀರೇಂದ್ರ ಪಾಟೀಲ ಅವರಿಂದ ಅಧಿಕಾರ ಕಿತ್ತುಕೊಂಡು, ಬಿ.ಎಸ್.ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಿದ್ದ ಕಾಂಗ್ರೆಸ್, ಲಿಂಗಾಯತರಿಗೆ ಅಪಮಾನ ಮಾಡಿತ್ತು. ಈಗ ಒಕ್ಕಲಿಗರನ್ನು ಟಾರ್ಗೆಟ್ ಮಾಡಿ ಒಂದು ಲಕ್ಷ ಪೆನ್‌ಡ್ರೈವ್ ತಯಾರು ಮಾಡಿ ಹಂಚಲಾಗಿದೆ. ಎಸ್‌ಐಟಿ ರಬ್ಬರ್ ಸ್ಟ್ಯಾಂಪ್ ಆಗಿದ್ದು, ಸಿಎಂ ಸಿದ್ದರಾಮಯ್ಯ ಹೇಳಿದಂತೆ ಕೇಳುತ್ತದೆ. ವಿಡಿಯೊ ಹಂಚುವುದು ಅಪರಾಧ ಎಂದು ಎಸ್‌ಐಟಿ ಹೇಳಿದೆ. ಪೆನ್‌ಡ್ರೈವ್ ಕೊಟ್ಟ ಚಾಲಕನನ್ನು ಜೈಲಿಗೆ ಹಾಕಿಲ್ಲ. ಪೆನ್‌ಡ್ರೈವ್ ಹಂಚಿದವರಲ್ಲಿ ಎಷ್ಟು ಜನರನ್ನು ಎಸ್‌ಐಟಿ ಜೈಲಿಗೆ ಹಾಕಿದೆ ಎಂದು ಅಶೋಕ ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.