ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಎಸ್‌.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್ ದಾರಿ ತಪ್ಪಿದ ಮಕ್ಕಳು: ಆರ್.ಅಶೋಕ

Published 24 ಮೇ 2024, 14:37 IST
Last Updated 24 ಮೇ 2024, 14:37 IST
ಅಕ್ಷರ ಗಾತ್ರ

ಬೆಂಗಳೂರು: ಶಾಸಕರಾದ ಎಸ್‌.ಟಿ.ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್‌ ಅವರು ದಾರಿ ತಪ್ಪಿದ ಮಕ್ಕಳು. ಇವರಿಗೆ ಈಗಾಗಲೇ ಪಕ್ಷದ ವತಿಯಿಂದ ನೋಟಿಸ್ ನೀಡಲಾಗಿದೆ. ಲೋಕಸಭಾ ಚುನಾವಣೆ ಬಳಿಕ ವರಿಷ್ಠರು ಕ್ರಮ ಕೈಗೊಳ್ಳಬಹುದು ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ ಹೇಳಿದರು.

ಈ ಇಬ್ಬರೂ ಶಾಸಕರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಬಿಬಿಎಂಪಿ ಚುನಾವಣೆ ನಡೆಸುವ ಬಗ್ಗೆ ಸರ್ಕಾರದ ಮೇಲೆ ನಂಬಿಕೆಯೇ ಇಲ್ಲ. ಲೋಕಸಭಾ ಚುನಾವಣಾ ಫಲಿತಾಂಶ ಹಾಗೂ ನರೇಂದ್ರ ಮೋದಿ ಪ್ರಧಾನಿ ಆಗುತ್ತಾರೋ ಇಲ್ಲವೋ ಎಂಬುದನ್ನು ನೋಡಿ ಆ ಬಳಿಕ ಚುನಾವಣೆ ನಡೆಸುವ ಬಗ್ಗೆ ತೀರ್ಮಾನಿಸಬಹುದು ಎಂದು ಅಶೋಕ ವ್ಯಂಗ್ಯವಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT