ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ವಿರೋಧಿ ಕಾಂಗ್ರೆಸ್‌ : ಅಶ್ವತ್ಥನಾರಾಯಣ

Published 29 ಮೇ 2024, 16:07 IST
Last Updated 29 ಮೇ 2024, 16:07 IST
ಅಕ್ಷರ ಗಾತ್ರ

ಬೆಂಗಳೂರು: ಗುಣಮಟ್ಟದ ಶಿಕ್ಷಣದಲ್ಲಿ ಶಿಕ್ಷಕರ ಪಾತ್ರ ಮತ್ತು ಆಡಳಿತ ನೀತಿ ಮಹತ್ವದ ಪಾತ್ರವಹಿಸುತ್ತದೆ. ಆದರೆ, ಕಾಂಗ್ರೆಸ್‌ ಪಕ್ಷ ಶಿಕ್ಷಕರ ಕುರಿತು ಕಾಳಜಿ, ಗೌರವ ನೀಡದೇ ಆಡಳಿತ ನಡೆಸುತ್ತಿದೆ. ಶಿಕ್ಷಕರು ಮತ್ತು ಪದವೀಧರರ ವಿರುದ್ಧದ ನೀತಿಗಳನ್ನೂ ಹೊಂದಿದೆ ಎಂದು ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ದೂರಿದರು.

ಬಿಜೆಪಿ– ಜೆಡಿಎಸ್‌ ಮೈತ್ರಿ ಪಕ್ಷಗಳು ಪದವೀಧರರ ವಿಚಾರ, ಶಿಕ್ಷಕರ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿವೆ. ಹಲವು ಸುಧಾರಣೆ, ಪ್ರಗತಿ, ನೂತನ ಕಾಯ್ದೆ ಮತ್ತು ಮತ್ತು ಕಾನೂನುಗಳನ್ನು ಜಾರಿಗೆ ತಂದಿದ್ದು, ಶಿಕ್ಷಕರು ಮತ್ತು ಪದವೀಧರರ ಪರವಾಗಿ ನಿರಂತರವಾಗಿ ಶ್ರಮಿಸುತ್ತಿರುವುದರಿಂದ ಈ ಬಾರಿ ಚುನಾವಣೆಯಲ್ಲಿ ಬೆಂಬಲಿಸಬೇಕು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಬಿಜೆಪಿ ಶಿಕ್ಷಕರ ಪರವಾಗಿ ಹಲವಾರು ಸುಧಾರಣೆಗಳನ್ನು, ಅನುದಾನಿತ ಸಂಸ್ಥೆಗಳಲ್ಲಿ ಹುದ್ದೆ ಭರ್ತಿ ಮಾಡುವ ಕಾರ್ಯವನ್ನೂ ಮಾಡಿದೆ. ಕಾಂಗ್ರೆಸ್‌ ಸರ್ಕಾರದ ನೇಮಕಾತಿಯನ್ನು ಸಂಪೂರ್ಣವಾಗಿ ನಿಷೇಧಿಸಿತ್ತು ಎಂದರು.

ರಾಜ್ಯವನ್ನು ಸಾಲದ ಸುಳಿಯಲ್ಲಿ ಸಿಲುಕಿಸಿರುವ ಕಾಂಗ್ರೆಸ್‌ ಸರ್ಕಾರವು ಏಳನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಲಿಲ್ಲ. ಒಪಿಎಸ್‌ ಕುರಿತು ಸುಳ್ಳು ಭರವಸೆ ಕೊಟ್ಟಿದ್ದಾರೆ. ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಎನ್‌ಪಿಎಸ್‌ ಜಾರಿಗೊಳಿಸಿತ್ತು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT