ಬೆಂಗಳೂರು: ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ (ಎನ್‌ಇಪಿ) ಸಂಶೋಧನೆ ಹಾಗೂ ಆವಿಷ್ಕಾರಕ್ಕೆ ಒತ್ತು ನೀಡಲಾಗಿದೆ. ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಯ ಗುರಿಯನ್ನೂ ಇದು ಹೊಂದಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರತಿಪಾದಿಸಿದರು.

ಎಜುಕೇಷನ್ ಪ್ರೊಮೋಷನ್ ಸೊಸೈಟಿ ಫಾರ್ ಇಂಡಿಯಾವು (ಇಪಿಎಸ್‌ಐ) ಕುಪೇಕಾ ಮತ್ತು ಕಾಮೆಡ್–ಕೆ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಎನ್‌ಇಪಿ ಜಾರಿ: ಶಿಕ್ಷಣ ಸಂಸ್ಥೆಗಳ ಮುಂದಿರುವ ಸವಾಲುಗಳು ಹಾಗೂ ಅವಕಾಶಗಳು’ ಕುರಿತ ವಿಚಾರಸಂಕಿರಣದಲ್ಲಿ ಮಾತನಾಡಿದರು.

‘ಎನ್‌ಇಪಿ ಅನುಷ್ಠಾನಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ರಾಜ್ಯ ಸರ್ಕಾರ ಮಾಡಿಕೊಂಡಿದೆ. ಶಾಲೆ ಹಾಗೂ ಉನ್ನತ ಶಿಕ್ಷಣದ ಪಠ್ಯಕ್ರಮ, ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಹಾಗೂ ಸುಧಾರಣೆಗಳತ್ತಲೂ ಗಮನ ಕೇಂದ್ರೀಕರಿಸಲಾಗಿದೆ. ಬಹುಶಿಸ್ತೀಯ ವಿಧಾನಗಳ ಮೂಲಕ ಮಾದರಿ ಕಾಲೇಜುಗಳನ್ನು ಸ್ಥಾಪಿಸುವ ಕಾರ್ಯವೂ ಪ್ರಗತಿಯಲ್ಲಿದೆ’ ಎಂದು ತಿಳಿಸಿದರು.

‘ಎನ್‌ಇಪಿ ಆಶಯಕ್ಕೆ ಅನುಗುಣವಾಗಿ 10 ವರ್ಷಗಳಲ್ಲಿ ಉನ್ನತ ಶಿಕ್ಷಣ ವ್ಯವಸ್ಥೆಗೆ ಆಧುನಿಕತೆಯ ಸ್ಪರ್ಶ ನೀಡಲಾಗುತ್ತದೆ. ಅದು ವಿದ್ಯಾರ್ಥಿ ಕೇಂದ್ರಿತವಾಗಿರುವಂತೆ ಮಾಡಲಾಗುತ್ತದೆ. 21ನೇ ಶತಮಾನದ ಅಗತ್ಯಗಳನ್ನು ಪರಿಗಣಿಸಿ ಜಾಗತಿಕ ಗುಣಮಟ್ಟದ ಬೋಧನೆಗೂ ಒತ್ತು ನೀಡಲಾಗಿದೆ. ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನವನ್ನೂ ಅಸ್ತಿತ್ವಕ್ಕೆ ತರಲಾಗುತ್ತದೆ’ ಎಂದು ತಿಳಿಸಿದರು.

ಎಐಸಿಟಿಇ ಮುಖ್ಯಸ್ಥ ಡಾ.ಅನಿಲ್ ದತ್ತಾತ್ರೇಯ ಸಹಸ್ರಬುದ್ಧೆ, ವೆಲ್ಲೂರು ತಾಂತ್ರಿಕ ಶಿಕ್ಷಣ ಸಂಸ್ಥೆಯ ಕುಲಪತಿ ಡಾ.ಜಿ.ವಿಶ್ವನಾಥನ್, ಎಂ.ಎಸ್.ರಾಮಯ್ಯ ಆನ್ವಯಿಕ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಂ.ಆರ್.ಜಯರಾಂ, ಬಿಐಎಂಟಿಇಸಿಎಚ್‌ನ ನಿರ್ದೇಶಕ ಡಾ.ಎಚ್.ಚತುರ್ವೇದಿ, ಪುಣೆಯ ಎಂಐಟಿ-ಎಡಿಟಿ ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ಅಧ್ಯಕ್ಷ ಪ್ರೊ.ಮಂಗೇಶ್ ಟಿ.ಕರಾಡ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.