ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಥೀಮ್‌ಪಾರ್ಕ್ ಕಾಮಗಾರಿ ಆರಂಭಕ್ಕೆ ಆಗ್ರಹ: ಅಶ್ವತ್ಥನಾರಾಯಣ

Published 22 ನವೆಂಬರ್ 2023, 0:11 IST
Last Updated 22 ನವೆಂಬರ್ 2023, 0:11 IST
ಅಕ್ಷರ ಗಾತ್ರ

ಬೆಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡ ಥೀಮ್‌ಪಾರ್ಕ್‌ ನಿರ್ಮಾಣ ಯೋಜನೆ ಸ್ಥಗಿತಗೊಂಡಿದ್ದು, ತಕ್ಷಣವೇ ಕಾಮಗಾರಿಯನ್ನು ಆರಂಭಿಸಬೇಕು ಎಂದು ಬಿಜೆಪಿ ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಒತ್ತಾಯಿಸಿದ್ದಾರೆ.

ಈ ಸಂಬಂಧ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

‘ನಾಡಪ್ರಭು ಕೆಂಪೇಗೌಡರ ಆದರ್ಶಗಳನ್ನು ಪ್ರೇರಣೆಯಾಗಿ ಪಡೆದು ಕರುನಾಡನ್ನು ಪ್ರಗತಿಯತ್ತ ಕೊಂಡೊಯ್ಯಬೇಕು ಎನ್ನುವ ಸದುದ್ದೇಶದಿಂದ ಕೆಂಪೇಗೌಡ ಪ್ರತಿಮೆ ಸ್ಥಾಪಿಸಲಾಯಿತು. ಅವರ ದೂರದೃಷ್ಟಿ ಪ್ರತಿಬಿಂಬಿಸುವ ಥೀಮ್‌ ಪಾರ್ಕ್‌ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅದನ್ನು ಸ್ಥಗಿತಗೊಳಿರುವುದು ಬೇಸರದ ಸಂಗತಿ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT