ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Bengaluru Kambala ನಮ್ಮ ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

Published 25 ನವೆಂಬರ್ 2023, 6:23 IST
Last Updated 25 ನವೆಂಬರ್ 2023, 6:23 IST
ಅಕ್ಷರ ಗಾತ್ರ

ಬೆಂಗಳೂರು: ಐತಿಹಾಸಿಕ ‘ಬೆಂಗಳೂರು ಕಂಬಳ ನಮ್ಮ ಕಂಬಳ’ಕ್ಕೆ ಇಂದು (ಶನಿವಾರ) ಅಧಿಕೃತ ಚಾಲನೆ ಸಿಕ್ಕಿದೆ.

ನಟ, ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ದೀಪ ಬೆಳಗಿಸಿ ಕಂಬಳಕ್ಕೆ ಚಾಲನೆ ನೀಡಿದರು. ಬಳಿಕ ಗಂಗಾರತಿ ಮಾಡುವ ಮೂಲಕ ಕಂಬಳ ಕರೆಗೆ ಪೂಜೆ ಸಲ್ಲಿಸಲಾಯಿತು.

ಬಿಜೆಪಿ ಸಂಸದೀಯ ಮಂಡಳಿ‌ ಸದಸ್ಯ ಬಿ.ಎಸ್ ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಡಿ.ವಿ ಸದಾನಂದಗೌಡ, ಸಂಗೀತ ನಿರ್ದೇಶಕ ಗುರುಕಿರಣ್‌, ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಆಶೋಕ್ ಕುಮಾರ್ ರೈ, ಶಾಸಕ ಗುರ್ಮೆ ಪ್ರಕಾಶ್ ಶೆಟ್ಟಿ ಸೇರಿದಂತೆ ಅನೇಕರು ಗಂಗಾರತಿಯಲ್ಲಿ ಭಾಗವಹಿಸಿದ್ದರು.

ಇದೇ ವೇಳೆ ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಹುತಾತ್ಮರಾದ ಕ್ಯಾಪ್ಟನ್‌ ಪ್ರಾಂಜಲ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT