ಬೆಂಗಳೂರು: ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚುವರಿ ಅನುದಾನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಲು ಸಂಸದರ ನಿಯೋಗ ಕರೆದೊಯ್ಯಲು ಸಿದ್ಧವಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ಶುಕ್ರವಾರ ಸಂಜೆ ಏರ್ಪಡಿಸಿದ್ದ ಸಂಸದರ ಸಭೆಯಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದ ಪ್ರಗತಿಯ ಕುರಿತು
ಚರ್ಚೆ ನಡೆಸಲಾಯಿತು. ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಸಂಸದರು ಯಡಿಯೂರಪ್ಪ ಅವರಿಗೆ ಬೇಡಿಕೆ ಸಲ್ಲಿಸಿದರು.

‘ಪ್ರವಾಹ ಮತ್ತು ಕೋವಿಡ್ನಿಂದಾಗಿ ರಾಜ್ಯವು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸಿತ್ತು. ಈಗ ಸ್ವಲ್ಪ ಚೇತರಿಕೆ ಕಾಣುತ್ತಿದೆ. ಅಭಿವೃದ್ಧಿ ಕಡೆಗೆ ಗಮನಹರಿಸಲಾಗುತ್ತಿದೆ. ಹಂತಹಂತವಾಗಿ ನಿಮ್ಮ ಕ್ಷೇತ್ರಗಳ ಬೇಡಿಕೆಗಳನ್ನೂ ಈಡೇರಿಸುತ್ತೇನೆ’ ಎಂದು ಯಡಿಯೂರಪ್ಪ ಭರವಸೆ ನೀಡಿದ್ದಾಗಿ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಅನುದಾನ ಪಡೆಯಲು ಮನವಿ ಸಲ್ಲಿಸಬೇಕು. ಅದಕ್ಕಾಗಿ ಕೇಂದ್ರದ ವಿವಿಧ ಇಲಾಖೆಗಳ ಸಚಿವರ ಮೇಲೆ ಒತ್ತಡ ಹೇರಿ ಕೆಲಸ ಮಾಡಿಸಿಕೊಳ್ಳಬೇಕು ಸೂಚಿಸಿದರು.

ಅಲ್ಲದೆ, ರಾಜ್ಯಕ್ಕೆ ಅಗತ್ಯವಿರುವ ಹೊಸ ಯೋಜನೆಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮುಂದಿನ ಬಜೆಟ್ ಅಧಿವೇಶನದೊಳಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು. ಸಭೆಯಲ್ಲಿ 11 ಸಂಸದರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.