ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನದಲ್ಲಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂಗೌಡ ಬೆಂಬಲಿಗರಿಂದ ಕೃತ್ಯ ಆರೋಪ

Published 12 ಏಪ್ರಿಲ್ 2024, 13:27 IST
Last Updated 12 ಏಪ್ರಿಲ್ 2024, 13:27 IST
ಅಕ್ಷರ ಗಾತ್ರ

ಹಾಸನ ನಗರದ ಎಂ.ಜಿ. ರಸ್ತೆಯಲ್ಲಿ ಇರುವ ಬಿಜೆಪಿ ಯುವ ಮುಖಂಡ ಐನೆಟ್ ವಿಜಯ್‌ಕುಮಾರ್ ಅವರ ಕಚೇರಿ ಮೇಲೆ 20 ಕ್ಕೂ ಹೆಚ್ಚು ಮಂದಿ ಕಿಡಿಗೇಡಿಗಳು ಶುಕ್ರವಾರ ದಾಳಿ ಮಾಡಿದ್ದು, ವಿಜಯ್‌ಕುಮಾರ್‌ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಕಚೇರಿ ಗಾಜುಗಳನ್ನು ಒಡೆದು ಹಾಕಲಾಗಿದ್ದು, ಪ್ರೀತಂಗೌಡ ಬೆಂಬಲಿಗರು ಈ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಐನೆಟ್‌ ವಿಜಯ್‌ಕುಮಾರ್‌, ‘ಕಚೇರಿಗೆ ಬಂದ ಕೆಲವರು ಮಾತನಾಡೋಣ ಬನ್ನಿ ಎಂದು ಕರೆದರು. ಅದಕ್ಕೆ ಮಾತಾಡೋಣ ಬನ್ನಿ ಎಂದೆ. ಪ್ರೀತಂಗೌಡ ಬಗ್ಗೆ ಮಾತನಾಡುತ್ತಿಯಾ ಎಂದು ಹಲ್ಲೆ ಮಾಡಿದರು. 100–150 ಕ್ಕೂ ಹೆಚ್ಚು ಜನರಿದ್ದರು. ಪ್ರೀತಂಗೌಡ ಕಡೆಯವರು ಈ ರೀತಿ ಮಾಡಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT