ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಧಾನಮಂಡಲ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

Published 29 ಫೆಬ್ರುವರಿ 2024, 15:12 IST
Last Updated 29 ಫೆಬ್ರುವರಿ 2024, 15:12 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಮಂಡಲದ ಅಧಿವೇಶನವನ್ನು ಗುರುವಾರ ಅನಿರ್ದಿಷ್ಟಾವಧಿ ಮುಂದೂಡಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ ಮೇಲಿನ ಚರ್ಚೆಗೆ ಉಭಯ ಸದನಗಳಲ್ಲಿ ಉತ್ತರ ನೀಡಿದರು. ಧನವಿನಿಯೋಗ ಮಸೂದೆಗಳಿಗೂ ಒಪ್ಪಿಗೆ ಪಡೆದ ಬಳಿಕ ಅಧಿವೇಶನ ಮುಂದೂಡಲಾಯಿತು.

ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ವಿಧಾನಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ಇದೇ 12ರಂದು ಭಾಷಣ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16ರಂದು ಬಜೆಟ್‌ ಮಂಡಿಸಿದರು.

ವಿಧಾನಸಭೆಯಲ್ಲಿ ಒಟ್ಟು 13 ದಿನ ಸುಮಾರು 60 ಗಂಟೆ 10 ನಿಮಿಷಗಳ ಕಲಾಪ ನಡೆಯಿತು. ಈ ಬಾರಿ ಒಟ್ಟು 1,955 ಪ್ರಶ್ನೆ ಸ್ವೀಕರಿಸಲಾಗಿದ್ದು, ಸದನದಲ್ಲಿ ಉತ್ತರಿಸಬೇಕಾಗಿದ್ದ 120 ಪ್ರಶ್ನೆಗಳ ಪೈಕಿ 117 ಪ್ರಶ್ನೆಗಳಿಗೆ ಉತ್ತರಿಸಲಾಗಿದೆ. ಲಿಖಿತ ಮೂಲಕ ಉತ್ತರಿಸುವ 1,653 ಪ್ರಶ್ನೆಗಳ ಪೈಕಿ 1,461 ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ. ಧನ ವಿನಿಯೋಗ ಮಸೂದೆಗಳೂ ಸೇರಿ ಒಟ್ಟು 26 ಮಸೂದೆಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್‌ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT