ಅಥಣಿ: ಆರೋಗ್ಯವಂತ ಸಮಾಜ ಕಟ್ಟುವಲ್ಲಿ ವೈದ್ಯರ ಪಾತ್ರ ಅತ್ಯಂತ ಮಹತ್ವದಾಗಿದೆ. ವೈದ್ಯ ವೃತ್ತಿ ಕೇವಲ ಉದ್ಯೋಗವಲ್ಲ, ಅದೊಂದು ಸಮಾಜ ಸೇವೆ ಎಂದು ಸ್ತ್ರೀರೋಗ ತಜ್ಞ ಡಾ. ಸೋಮಶೇಖರ ಪಾಟೀಲ ಹೇಳಿದರು.

ಅವರು ಗುರುವಾರ ಇಲ್ಲಿನ ಕೆ.ಎಂ.ಸಿ ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಕೆ.ಎಂ.ಸಿ ಆಸ್ಪತ್ರೆಯ ಕಟ್ಟಡ ಉದ್ಘಾಟಿಸಿದ ಯುವ ಮುಖಂಡ ಚಿದಾನಂದ ಸವದಿ ಮಾತನಾಡಿ, ಈ ಆಸ್ಪತ್ರೆಯ ವೈದ್ಯರಿಂದ ರೋಗಿಗಳಿಗೆ ಗುಣಮಟ್ಟದ ಸೇವೆ ದೊರಕಲಿ ಎಂದು ಶುಭ ಹಾರೈಸಿದರು. ಸಾನ್ನಿಧ್ಯ ವಹಿಸಿದ್ದ ನದಿ ಇಂಗಳಗಾವದ ಸಿದ್ದಲಿಂಗ ಸ್ವಾಮೀಜಿ, ಶೆಟ್ಟರ ಮಠದ ಮರುಳು ಸಿದ್ಧ ಸ್ವಾಮೀಜಿ ಆಶೀರ್ವಚನ ನೀಡಿದರು. ಎಂಜಿನಿಯರ್ ರಾಜಶೇಖರ ಟೋಪಗಿ, ಕಲೀಲ ಜಾಲಿಹಾಳ ಅವರನ್ನು ಸನ್ಮಾನಿಸಲಾಯಿತು.

ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಪರಪ್ಪ ಸವದಿ, ನಿರ್ದೇಶಕ ಜಿ ಎಂ. ತೇವರಮನಿ, ಶಿವರುದ್ರ ಗೂಳಪ್ಪನವರ, ಸುರೇಶ್ ಮಾಯಣ್ಣವರ, ರಾಜೀವ ನಾಡಗೌಡ, ಎಸ್ ಆರ್ ಮಾಳಿ, ಮುರಿಗೆಪ್ಪ ಕುರೆನ್ನವರ, ಶೋಭಾ ಕುರೆನ್ನವರ, ಡಾ. ರಶ್ಮಿ ಕುರೆನ್ನವರ,ಡಾ.ವಿಜಯ ಕುರೆನ್ನವರ್,ಡಾ. ಪ್ರೀತಿ ಕುರೆನ್ನವರ ,ಪ್ರಕಾಶ ಚನ್ನಣ್ಣವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಎಸ್ ಆರ್ ಮಾಳಿ ಸ್ವಾಗತಿಸಿದರು. ಡಾ. ಸಂಜಯ ಕುರೆನ್ನವರ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜಯ ಹುದ್ದಾರ ನಿರೂಪಿಸಿದರು. ಡಾ. ವಿಜಯ ಕುರೆನ್ನವರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-21-1277908663

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.