ಮೈಸೂರು: ಹಲ್ಲೆಗೆ ಒಳಗಾಗಿ ಇಲ್ಲಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿರುವ ಶಾಸಕ ತನ್ವೀರ್ ಸೇಠ್ ಅವರ ಆರೋಗ್ಯದಲ್ಲಿ ಮಂಗಳವಾರ ಚೇತರಿಕೆ ಕಂಡು ಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಆಸ್ಪತ್ರೆಯ ವೈದ್ಯಕೀಯ ಸೇವೆಗಳ ಅಧೀಕ್ಷಕ ಡಾ.ಉಪೇಂದ್ರ ಶೆಣೈ, ‘ತನ್ವೀರ್ ಸೇಠ್ ಚಿಕಿತ್ಸೆಗೆ ಉತ್ತಮವಾಗಿಯೆ ಸ್ಪಂದಿಸುತ್ತಿದ್ದಾರೆ. ಸಂಜೆ ವೇಳೆಗೆ ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗುವುದು’ಎಂದು ಹೇಳಿದ್ದಾರೆ.

ಈ ಮಧ್ಯೆ ತನ್ವೀರ್ ಸೇಠ್ ಅವರ ಗನ್ ಮ್ಯಾನ್ ಫೈರೋಜ್ ಖಾನ್ ಅವರನ್ನು ಅಮಾನತುಪಡಿಸಲಾಗಿದೆ. ಫೈರೋಜ್ ಖಾನ್ ಇದ್ದಾಗ್ಯೂ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆಸಿರುವುದು ಭದ್ರತಾಲೋಪ ಎಂದು ಪರಿಗಣಿಸಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ರಾತ್ರಿ ಇಡೀ ವಿಚಾರಣೆ: ಹಲ್ಲೆಗೆ ಸಂಬಂಧಿಸಿದಂತೆ ವಶಕ್ಕೆ ತೆಗೆದುಕೊಂಡಿರುವ 10 ಮಂದಿಯನ್ನು ಪೊಲೀಸರು ಅಜ್ಞಾತಸ್ಥಳದಲ್ಲಿ ರಾತ್ರಿ ಇಡಿ ವಿಚಾರಣೆ ನಡೆಸಿದ್ದಾರೆ. ಇನ್ನಷ್ಟು ಮಂದಿಯ ಹುಡುಕಾಟದಲ್ಲಿ ತೊಡಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ...ತನ್ವೀರ್ ಸೇಠ್ ಕೊಲೆಗೆ ಸಂಘಟನೆ ಸಂಚು: ಐದು ಮಂದಿ ಪೊಲೀಸರ ವಶಕ್ಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.