ಬೆಂಗಳೂರು: ‘ಉದ್ಯೋಗ ಕೊಡಿಸುವ ನೆಪದಲ್ಲಿ ವಿವಾಹಿತ ದಲಿತ ಮಹಿಳೆಯೊಬ್ಬರನ್ನು ಪುಸಲಾಯಿಸಿ ಜಿಲ್ಲಾ ಕೇಂದ್ರವೊಂದಕ್ಕೆ ಕರೆದುಕೊಂಡು ಹೋಗಿ, ಆಕೆಯನ್ನು ಬಾಡಿಗೆ ಮನೆಯಲ್ಲಿ ಕೂಡಿ ಹಾಕಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸಿದ್ದಲ್ಲದೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂಬ ಆರೋಪ ಎದುರಿಸುತ್ತಿರುವ ವ್ಯಕ್ತಿಯೊಬ್ಬರಿಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ.

ಈ ಸಂಬಂಧ ಜಾಮೀನು ಕೋರಿ 33 ವರ್ಷದ ಆರೋಪಿ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು, ಧಾರವಾಡ ಪೀಠದಲ್ಲಿನ ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿ ಆದೇಶಿಸಿದೆ.

‘ಈ ಪ್ರಕರಣದಲ್ಲಿ ಆರೋಪಿಯು, ಅಮಾಯಕ ಮತ್ತು ಬಡ ದಲಿತ ಮಹಿಳೆಗೆ ಉದ್ಯೋಗ ಕೊಡಿಸುವ ನೆಪದಲ್ಲಿ ಜಿಲ್ಲಾ ಕೇಂದ್ರದ ನಗರವೊಂದಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಮನೆಯೊಂದರಲ್ಲಿ ಆಕೆಯನ್ನು ಕಣ್ಗಾವಲಿನಲ್ಲಿ ಇರಿಸಿ ಬಲವಂತದ ಮತಾಂತರಕ್ಕೆ ಪ್ರಯತ್ನಿಸಿದ್ದಾರೆ. ಅಂತೆಯೇ, ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪವೂ ಇರುವ ಕಾರಣ ಇದೊಂದು ಗಂಭೀರವಾದ ಪ್ರಕರಣ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

‘ಇಂತಹ ಕೆಟ್ಟ ಬೆಳವಣಿಗೆ ಹಾಗೂ ಚಟುವಟಿಕೆಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಮತ್ತು ನಿಯಂತ್ರಿಸುವಲ್ಲಿ ನ್ಯಾಯಾಲಯಗಳು ಸೂಕ್ಷ್ಮವಾಗಿರಬೇಕು. ಆರೋಪಿಗಳ ಜಾಮೀನು ಅರ್ಜಿಗಳನ್ನು ಪರಿಗಣಿಸುವಾಗ, ಅಪರಾಧದ ಸ್ವರೂಪ, ಪ್ರಕರಣದ ಗಂಭೀರತೆ ಮತ್ತು ಆರೋಪಿಗೆ ಜಾಮೀನು ನೀಡಿದರೆ ಉಂಟಾಗಬಹುದಾದ ಸಾಮಾಜಿಕ ಪರಿಣಾಮಗಳನ್ನು ಎಚ್ಚರದಿಂದ ಗಮನಿಸಬೇಕು’ ಎಂದು ಹೇಳಿದೆ.

‘ಇಂತಹ ಚಟುವಟಿಕೆಗಳನ್ನು ತಡೆಗಟ್ಟುವ ಮತ್ತು ಸಮಾಜದ ಮುಗ್ಧ, ಹಿಂದುಳಿದ ಮಹಿಳೆಯರು ಮತ್ತು ಮಕ್ಕಳನ್ನು ರಕ್ಷಿಸಲು ನ್ಯಾಯಾಲಯಗಳು ಜಾಗೃತವಾಗಿವೆ ಎಂಬ ಸಂದೇಶವನ್ನು ಸಮಾಜಕ್ಕೆ ನೀಡುವುದು ಅಗತ್ಯವಾಗಿದೆ’ ಎಂದು ಆದೇಶದಲ್ಲಿ ವಿವರಿಸಿರುವ ನ್ಯಾಯಮೂರ್ತಿಗಳು ಆರೋಪಿಯ ಜಾಮೀನು ಅರ್ಜಿ ತಿರಸ್ಕರಿಸಿದ್ದಾರೆ.

ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 2024ರ ಮೇ 21ರಂದು ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯು ಪರಿಶಿಷ್ಟ ಜಾತಿ–ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ–2015ರ ಕಲಂ 14ಎ (2)ರ ಅಡಿಯಲ್ಲಿ ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.