ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ತಿಬೆಲೆ ಪಟಾಕಿ ದುರಂತ: ಮತ್ತೊಬ್ಬ ಗಾಯಾಳು ಸಾವು, ಮೃತರ ಸಂಖ್ಯೆ 16ಕ್ಕೆ ಏರಿಕೆ

Published 12 ಅಕ್ಟೋಬರ್ 2023, 4:46 IST
Last Updated 12 ಅಕ್ಟೋಬರ್ 2023, 4:46 IST
ಅಕ್ಷರ ಗಾತ್ರ

ಆನೇಕಲ್: ಅತ್ತಿಬೆಲೆ ಪಟಾಕಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೆಂಕಟೇಶ್ ಎಂಬುವರು ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಇದರೊಂದಿಗೆ ಅತ್ತಿಬೆಲೆ ಪಟಾಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿದೆ.

ವೆಂಕಟೇಶ್ ಸ್ನೇಹಿತನೊಂದಿಗೆ ಪಟಾಕಿ ಖರೀದಿಗೆ ಹೋಗಿದ್ದ ಸಂದರ್ಭದಲ್ಲಿ ಪಟಾಕಿ ದುರಂತ ಸಂಭವಿಸಿತ್ತು. ದುರಂತದಲ್ಲಿ ಅವರ ಸ್ನೇಹಿತ ಪಾರಾಗಿದ್ದು, ವೆಂಕಟೇಶ್ ಗೋದಾಮಿನ ಒಳಗೆ ಸಿಲುಕಿ ಹಾಕಿಕೊಂಡಿದ್ದರು. ಬೆನ್ನು, ತಲೆ, ಕೈ ಕಾಲುಗಳುಗಳಿಗೆ ಬೆಂಕಿ ತಗುಲಿ ಸುಟ್ಟ ಗಾಯಗಳಾಗಿದ್ದವು.

ಮೃತ ವೆಂಕಟೇಶ್ (25) ಬೆಂಗಳೂರು ನಗರ ಜಿಲ್ಲೆಯ ಗಾರೆ ಭಾವಿಪಾಳ್ಯದ ನಿವಾಸಿಯಾಗಿದ್ದು, ವೃತ್ತಿಯಲ್ಲಿ ಛಾಯಾಗ್ರಾಹಕರಾಗಿದ್ದ ಅವರು ಪ್ರವೃತ್ತಿಯಲ್ಲಿ ಬಾಡಿ ಬಿಲ್ಡರ್ ಆಗಿದ್ದರು. ಪರಿಚಯದವರ ಕಾರ್ಯಕ್ರಮಕ್ಕೆ ಪಟಾಕಿ ತರಲು ಅತ್ತಿಬೆಲೆಗೆ ಹೋಗಿದ್ದರು.

ದುರಂತದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಯುವಕ ತಮಿಳುನಾಡಿನ ದಿನೇಶ್ ಬುಧವಾರ ಮೃತಪಟ್ಟಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT