ಔರಾದ್: ನಿವೃತ್ತ ನೌಕರರ ವೇತನ ಪರಿಷ್ಕರಣೆ ಒಳಪಡಿಸದಿರುವ ಕೇಂದ್ರ ಸರ್ಕಾರದ ಧೋರಣೆ ಕೈಬಿಡುವಂತೆ ತಾಲ್ಲೂಕಿನ ನಿವೃತ್ತ ನೌಕರರ ಸಂಘ ಆಗ್ರಹಿಸಿದೆ.

ಸಂಘದ ಮುಖಂಡ ಬಸವಣಪ್ಪ ಪಡಂಪಳ್ಳೆ, ಗುರುನಾಥ ತವಾಡೆ, ವಿ.ಬಿ. ಗಾದಗೆ, ನಾಗನಾಥ ಪಾಟೀಲ ಮತ್ತಿತರರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಮನವಿಪತ್ರವನ್ನು ಬುಧವಾರ ತಹಶೀಲ್ದಾರ್ ಮಹೇಶ ಪಾಟೀಲ ಅವರಿಗೆ ಸಲ್ಲಿಸಿದರು.

ಸರ್ಕಾರಿ ನಿವೃತ್ತ ನೌಕರರಿಗೆ ಹಾಗೂ ಅವರ ಕುಟಂಬ ಪಿಂಚಣಿದಾರರಿಗೆ ತುಟ್ಟಿ ಭತ್ಯೆ ನೀಡದಿರುವ ಬಗ್ಗೆ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ ಅವರು ಚರ್ಚೆ ನಡೆಸುತ್ತಿರುವುದು ಗಂಭೀರ ವಿಷಯ. ನಿವೃತ್ತ ನೌಕರರು ತುಟ್ಟಿ ಭತ್ಯೆ ಪಡೆಯುವುದು ಅವರ ಹಕ್ಕು. ಹೆಚ್ಚುತ್ತಿರುವ ಬೆಲೆ ಏರಿಕೆಯಲ್ಲಿ ನಿವೃತ್ತ ನೌಕರರು ಜೀವನ ನಡೆಸುವುದು ತುಂಬಾ ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ತುಟ್ಟಿ ಭತ್ಯ ಸ್ಥಗಿತ ಮಾಡುವುದು ಸರಿಯಲ್ಲ. ಸರ್ಕಾರ ಇಂತಹ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-33-187842048

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.