ಬೆಳಗಾವಿ: ಇಲ್ಲಿನ ಕೆಎಲ್ಇ ಡಾ.ಎಂ.ಎಸ್. ಶೇಷಗಿರಿ ಎಂಜಿನಿಯರಿಂಗ್ ಹಾಗೂ ತಾಂತ್ರಿಕ ಕಾಲೇಜಿನ ಬಿ.ಇ. ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಅಕ್ಷಯ್ ರಜಯ್ ಹಾಗೂ ಅಜಯ್‌ಕುಮಾರ್ ಸ್ವಯಂಚಾಲಿತ ಸ್ಯಾನಿಟೈಸರ್ ಯಂತ್ರ ಅಭಿವೃದ್ಧಿಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾವಲಂಬಿ ಭಾರತ ಅಭಿಯಾನದ ಭಾಗವಾಗಿ ಹಾಗೂ ಕೋವಿಡ್-19 ಸಾಂಕ್ರಾಮಿಕ ರೋಗ ವ್ಯಾಪಕವಾಗಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಸ್ವಯಂಚಾಲಿತ ಸ್ಯಾನಿಟೈಸರ್ ಯಂತ್ರವನ್ನು ವಿನ್ಯಾಸ ಮಾಡಿದ್ದಾರೆ.

ಈ ಯಂತ್ರವನ್ನು ಮುಟ್ಟದೆಯೂ ಕೈಗಳನ್ನು ಸ್ಯಾನಿಟೈಸ್ ಮಾಡಿಕೊಳ್ಳಬಹುದಾಗಿದೆ. ಕಾಲೇಜಿನ ಹಿರಿಯ ವಿದ್ಯಾರ್ಥಿ ಪ್ರಶಾಂತ ಮೋಹಿತೆ ಸಹಕಾರದೊಂದಿಗೆ ವಿಭಾಗದ ಮುಖ್ಯಸ್ಥ ಡಾ.ಸುಭಾಷ ಸಂಕೇಶ್ವರಿ ಅವರ ಮಾರ್ಗದರ್ಶನದಲ್ಲಿ ಈ ಯಂತ್ರ ಅಭಿವೃದ್ಧಿಪಡಿಸಿದ್ದಾರೆ. ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ನಿತ್ಯವೂ ಈ ಯಂತ್ರದ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ.

ವಿದ್ಯಾರ್ಥಿಗಳನ್ನು ಪ್ರಾಚಾರ್ಯ ಡಾ.ಬಸವರಾಜ ಕಟಗೇರಿ, ವಿಭಾಗಗಳ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.