ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಆಯೇಷಾ ಖಾನಂ ಅಧ್ಯಕ್ಷೆ

Published 10 ಜುಲೈ 2024, 15:39 IST
Last Updated 10 ಜುಲೈ 2024, 15:39 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ, ಮೊದಲ ಬಾರಿಗೆ ಮಹಿಳೆಯೊಬ್ಬರಿಗೆ ಅಕಾಡೆಮಿ ಉನ್ನತ ಸ್ಥಾನ ಸಿಕ್ಕಿದಂತಾಗಿದೆ.

ಪತ್ರಕರ್ತರಾದ ಚಿತ್ರದುರ್ಗದ ಎಂ.ಎನ್‌.‌ ಅಹೋಬಳಪತಿ, ಕೊಪ್ಪಳದ ಕೆ. ನಿಂಗಜ್ಜ ಮತ್ತು ಪತ್ರಿಕಾ ಛಾಯಾಗ್ರಾಹಕ ಬೆಂಗಳೂರಿನ ಕೆ. ವೆಂಕಟೇಶ್ ಅವರನ್ನು ಅಕಾಡೆಮಿ ಸದಸ್ಯರನ್ನಾಗಿ ನೇಮಿಸಲಾಗಿದೆ. ಪತ್ರಿಕಾ ಛಾಯಾಗ್ರಾಹಕರನ್ನೂ ಅಕಾಡೆಮಿ ಸದಸ್ಯ ಸ್ಥಾನಕ್ಕೆ ‌ ಮೊದಲ ಬಾರಿ ಪರಿಗಣಿಸಲಾಗಿದೆ.

ಕಲಬುರಗಿ ಜಿಲ್ಲೆಯವರಾದ ಆಯೇಷಾ ಖಾನಂ, ಅವರು ಕಳೆದ 26 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿದ್ದಾರೆ. ಸುದ್ದಿ ವಾಹಿನಿ ದೂರದರ್ಶನದಲ್ಲಿ ಮುಖ್ಯ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT