ಬೆಂಗಳೂರಿನ ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ ರಾಮ ಸೀತಾ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಶ್ರೀರಾಮ್ ಕೂಗಿ ಭಕ್ತರನ್ನು ಹುರಿದುಂಬಿಸಿದರು. ‘ಜೈ ಶ್ರೀರಾಮ್ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸೊತ್ತು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.