ಬೆಂಗಳೂರು: ಆಯುರ್ವೇದ ಕೋರ್ಸ್ ಹೊರತುಪಡಿಸಿ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರೆ ಎಲ್ಲ ಕೋರ್ಸ್ಗಳ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ನಡೆಸಿದೆ.

ಮೊದಲ ಸುತ್ತಿನ ಸೀಟು ಹಂಚಿಕೆಗೆ ಕೋರ್ಸ್ ಹಾಗೂ ಕಾಲೇಜುಗಳ ಆಯ್ಕೆ ದಾಖಲಿಸಲು ಜುಲೈ 29ರವರೆಗೆ ಅವಕಾಶ ನೀಡಲಾಗಿತ್ತು. ಅವಧಿ ಮುಗಿದರೂ ಆಯುರ್ವೇದ ಕೋರ್ಸ್ನ ಸೀಟು ಲಭ್ಯತಾ ಪಟ್ಟಿ ಸಿಕ್ಕಿಲ್ಲ. ಹಾಗಾಗಿ, ಅದೊಂದು ಕೋರ್ಸ್ ಹೊರತುಪಡಿಸಿ, ಉಳಿದ ಎಲ್ಲ ಕೋರ್ಸ್ಗಳ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತಿದೆ. ಎರಡನೇ ಸುತ್ತಿನ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ ಎಂದು ಕೆಇಎ ಹೇಳಿದೆ.

ಡಿಸಿಇಟಿ ಎರಡನೇ ಸುತ್ತಿನ ಸೀಟು ಹಂಚಿಕೆ:

ಎರಡನೇ ಸುತ್ತಿನ ಡಿಸಿಇಟಿ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ಪ್ರಕಟಿಸಿದೆ.

ಮೊದಲ ಮತ್ತು ಎರಡನೇ ಸುತ್ತಿನ ಕೌನ್ಸೆಲಿಂಗ್ನಲ್ಲಿ 12,282 ಮಂದಿಗೆ ಸೀಟು ಹಂಚಿಕೆ ಮಾಡಲಾಗಿದೆ. ಜು.30ರಿಂದ 31ರವರೆಗೆ ಚಲನ್ ಡೌನ್ಲೋಡ್ ಮಾಡಿಕೊಂಡು ಆ.1ರೊಳಗೆ ಶುಲ್ಕ ಪಾವತಿಸಬೇಕು. ಆ.2ರೊಳಗೆ ಕಾಲೇಜುಗಳಿಗೆ ಪ್ರವೇಶ ಪಡೆಯಬೇಕು ಎಂದು ಪ್ರಾಧಿಕಾರ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.