ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಗರಣಗಳಿಂದ ಪಾರಾಗಲು ‌ನನ್ನ ವಿರುದ್ಧ ಹೇಳಿಕೆ: ಬಿ.ಕೆ. ಹರಿಪ್ರಸಾದ್ ಆರೋಪ

Published 11 ಸೆಪ್ಟೆಂಬರ್ 2023, 9:16 IST
Last Updated 11 ಸೆಪ್ಟೆಂಬರ್ 2023, 9:16 IST
ಅಕ್ಷರ ಗಾತ್ರ

ಕೊಪ್ಪಳ: ‘ನನ್ನ ವಿರುದ್ಧ ಹೈಕಮಾಂಡ್ ಗೆ ದೂರು ನೀಡುವವರು ಅದಕ್ಕೂ ‌ಮೊದಲು ತಮ್ಮ ಮೇಲಿರುವ ಹಗರಣಗಳಿಂದ ಪಾರಾಗಲಿ. ಹಗರಣಗಳಿಂದ ಪಾರಾಗುವ ಸಲುವಾಗಿಯೇ ‌ನನ್ನ ವಿರುದ್ಧ ಕೆಲವರು ಹೇಳಿಕೆ ನೀಡುತ್ತಿದ್ದಾರೆ‘ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು.

ಕುಕನೂರು ತಾಲ್ಲೂಕಿನ ತಳಬಾಳ ಗ್ರಾಮದಲ್ಲಿ ಸೋಮವಾರ ಸಾಮೂಹಿಕ ವಿವಾಹ ಕಾರ್ಯಕ್ರಮದ ವೇಳೆ ಮಾತನಾಡಿದ ಅವರು, ‘ಪಕ್ಷದ ರಾಜ್ಯ ಉಸ್ತುವಾರಿಗೆ ದೂರು ನೀಡುವುದಾಗಿ ಕೆಲವರು ಹೇಳುತ್ತಿದ್ದಾರೆ. ದೂರು ಕೊಟ್ಟರೆ ಬಹಳ ಸಂತೋಷ. ಉಸ್ತುವಾರಿಗೆ ಮಾತ್ರ ಯಾಕೆ, ಎಲ್ಲರಿಗೂ ದೂರು ನೀಡಲಿ‘ ಎಂದರು.

‘ನನ್ನ ವಿರುದ್ಧ ದೂರು ನೀಡುವವರು ಮೊದಲು ತಾವು ಎನೆಂದು ತಿಳಿದು ಕೊಳ್ಳಬೇಕು. ತಮ್ಮ ಮೇಲಿರುವ ಹಗರಣಗಳಿಂದ ಪಾರಾಗಲು ದೂರು ನೀಡುತ್ತಿದ್ದಾರೆ ಎಂದು ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ವಿರುದ್ಧ ಅಸಮಾಧಾನ ಹೊರಹಾಕಿದರು. ಅವರಿಗೆ ಹಗರಣಗಳಿಂದ ಪಾರಾಗುವ ಧೈರ್ಯವಿದ್ದರೆ ದೂರು ನೀಡುವ ಹೇಳಿಕೆಗಳನ್ನು ನಿರಂತರವಾಗಿ ನೀಡುತ್ತಲೇ ಇರಲಿ‘ ಎಂದರು.

ಶಾಸಕ‌ ಬಸನಗೌಡ ಪಾಟೀಲ ಯತ್ನಾಳ ಮೂರು ದಿನಗಳ ಹಿಂದೆ ಕೊಪ್ಪಳದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಮೂರು ತಿಂಗಳಲ್ಲಿ ಪತನವಾಗಲಿದೆ ಎಂದಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಹರಿಪ್ರಸಾದ್, ‘ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಕಿತ್ತಾಟ ಇಲ್ಲ. ಆಂತರಿಕ ಪ್ರಜಾಪ್ರಭುತ್ವ ಇದೆ. ಅದರಂತೆ ಮುಕ್ತವಾಗಿ ಮಾತನಾಡುತ್ತೇನೆ. ಬಿಜೆಪಿ ನಾಯಕರ ಹಾಗೆ ನಾಗಪುರದಿಂದ ನಿರ್ದೇಶಕ ತೆಗೆದುಕೊಂಡು ಮಾತನಾಡುವುದಿಲ್ಲ‘ ಎಂದು ತಿರುಗೇಟು ನೀಡಿದರು.

ಹರಿಪ್ರಸಾದ್ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದ ಎಚ್. ವಿಶ್ವನಾಥ್ ಹೇಳಿಕೆ ಬಗ್ಗೆ ‌ಕೇಳಲಾದ ಪ್ರಶ್ನೆಗೆ ವಿಶ್ವನಾಥ್ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದಾರಾ? ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT