ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಧಿಕಾರದ ಆಸೆ ಬಿಟ್ಟರೆ ಆರ್ಥಿಕ ನಿರ್ವಹಣೆಯ ಜ್ಞಾನವಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಹೊಸಕೋಟೆಯನ್ನು ಮಾದರಿ ತಾಲ್ಲೂಕು ಮಾಡ್ತೀನಿ ಎಂದು ಹೇಳುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ, ಪ್ರವಾಹದಲ್ಲಿ ಆಸ್ತಿಪಾಸ್ತಿ ಕಳೆದುಕೊಂಡು ಬೀದಿಯಲ್ಲಿ ಬದುಕು ಸಾಗಿಸುತ್ತಿರುವ ಜನ ಮರೆತುಹೋಗಿದ್ದಾರೆ. ಅವರ ಬದುಕು ಸರಿ ಮಾಡೋದು ಯಾವಾಗ? ಹುಸಿ ಭರವಸೆ, ಸುಳ್ಳು ಜಾಹಿರಾತು ಜನರ ಹೊಟ್ಟೆ ತುಂಬಿಸುತ್ತಾ? ಎಂದು ಪ್ರಶ್ನಿಸಿದರು.

‘ಮಹಾರಾಷ್ಟ್ರ, ಹರಿಯಾಣದ ಚುನಾವಣಾ ಫಲಿತಾಂಶವನ್ನು ಮರೆತು ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಭ್ರಮೆಯಲ್ಲಿ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಮುಕ್ತ ಭಾರತ ಮಾಡ್ತೀನಿ ಅಂದವರೆಲ್ಲ ಅವರೇ ನಿಧಾನವಾಗಿ ಒಂದೊಂದೆ ರಾಜ್ಯಗಳಲ್ಲಿ ಕಣ್ಮರೆಯಾಗುತ್ತಿದ್ದಾರೆ. ದೇಶದ ಜನಕ್ಕೆ ಯಾರು ತಮ್ಮ ಹಿತ ಕಾಯುವವರು ಎಂದು ಕ್ರಮೇಣ ಅರ್ಥವಾಗುತ್ತಿದೆ. ಕೇಂದ್ರದಿಂದ ಬರಬೇಕಿದ್ದ ಜಿಎಸ್‌ಟಿ ಸಂಗ್ರಹಣೆಯ ರಾಜ್ಯದ ಪಾಲು ₹5,600 ಕೋಟಿ ಹಣ ಬಂದಿಲ್ಲ’ ಎಂದು ಹೇಳಿದರು.

ಅವರು ಕುರ್ಚಿ ಮೇಲೆ ಕೂತು ಅಧಿಕಾರ ಉಳಿಸಿಕೊಳ್ಳಲು ಭಜನೆ ಮಾಡುವ ಬದಲು, ಕೇಂದ್ರದ ಬಳಿ ಗಟ್ಟಿ ಮಾತನಾಡಿದರೆ ರಾಜ್ಯದ ಪಾಲಿನ ಅನುದಾನ ಬಂದು ಸರ್ಕಾರಿ ನೌಕರರಿಗೆ ಸಂಬಳವೂ ಸಿಗುತ್ತೆ, ನೆರೆ ಸಂತ್ರಸ್ತರಿಗೆ ಪರಿಹಾರದ ಹಣವೂ ತಲುಪುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.