ಹಳೇಬೀಡು: ಮಾಜಿ ಸಚಿವ ಹಾಗೂ ಹಾಲಿ ಎಐಸಿಸಿ ಸದಸ್ಯರಾಗಿರುವ ಗಂಡಸಿ ಬಿ.ಶಿವರಾಂ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಂಪುಟ ದರ್ಜೆ ಸಚಿವ ಸ್ಥಾನ ನೀಡಬೇಕು ಎಂದು ಬೇಲೂರು ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎನ್.ಶರತ್ ವಿನಂತಿಸಿದ್ದಾರೆ.

ಹಳೇಬೀಡಿನಲ್ಲಿ ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿ.ಶಿವರಾಂ ಅವರು 42 ವರ್ಷದಿಂದ ಕಾಂಗ್ರೆಸ್ ಪಕ್ಷದ ಹಿತಕ್ಕಾಗಿ ಶ್ರಮಿಸಿದ್ದಾರೆ. ಜನ ಸೇವೆಯಲ್ಲಿಯೂ ಸಕ್ರಿಯರಾಗಿದ್ದಾರೆ. ಜನರ ನಾಡಿ ಮಿಡಿತವನ್ನು ಅರ್ಥ ಮಾಡಿಕೊಂಡು ಮುನ್ನಡೆಯುವ ನಾಯಕರೆನಿಸಿಕೊಂಡಿದ್ದಾರೆ. ನಾಲ್ಕು ಬಾರಿ ಶಾಸಕರಾಗಿದ್ದಲ್ಲದೆ, ಒಮ್ಮೆ ಸಚಿವರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಕೆಪಿಸಿಸಿ ಉಪಾಧ್ಯಕ್ಷರಾಗಿಯೂ ಅವರು ಕಾಂಗ್ರೆಸ್ ಪಕ್ಷ ಬಲಪಡಿಸುವ ಕೆಲಸ ಮಾಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದ ಅಂತರದಲ್ಲಿ ಸೋತಿದ್ದಾರೆ. ಜನರ ಕಷ್ಟಕ್ಕೆ ಸ್ಪಂದಿಸುವ ಶಿವರಾಂ ಜನ ನಾಯಕ ಎಂದು ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-36-1393794404

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.