ಕಲಬುರ್ಗಿ: ‘ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಆರೋಗ್ಯ ಸೇರಿದಂತೆ ಇತರೆ ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ವೈದ್ಯರೇ ಅವರ ಬಳಿ ತೆರಳಿ ಚರ್ಚಿಸಿದ್ದಾರೆ. ಇದನ್ನು ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಇತ್ಯರ್ಥ ಮಾಡಬಹುದು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮಲು ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಪುತ್ರ ಎಂಬ ಕಾರಣಕ್ಕೆ ಅವರು ಸಕ್ರಿಯವಾಗಿದ್ದಾರೆ. ವೈದ್ಯರಿಗೆ ಶೀಘ್ರವೇ ಸಿಹಿ ಸುದ್ದಿ ನೀಡಿ, ಕೆಲ ಬೇಡಿಕೆಗಳನ್ನು ಈಡೇರಿಸುತ್ತೇವೆ’ ಎಂದರು.

‘ಕೊರೊನಾ ಸೋಂಕಿತರಿಂದ ನಿಗದಿಗಿಂತಲೂ ಅಧಿಕ ಹಣ ವಸೂಲಿ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಪರವಾನಗಿ ರದ್ದುಪಡಿಸುತ್ತೇವೆ. ಹಲವು ಕಡೆಗಳಲ್ಲಿ ಶುಲ್ಕ ನಿಯಂತ್ರಣಕ್ಕಾಗಿ ಐಎಎಸ್ ಅಧಿಕಾರಿಗಳ ತಂಡವನ್ನು ರಚಿಸಲಾಗಿದ್ದು, ಹೆಚ್ಚುವರಿ ಬಿಲ್‌ಗಳ ಮೊತ್ತವನ್ನು ರೋಗಿಗಳಿಗೆ ಮರಳಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.