ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಷ್ಕರಕ್ಕೆ ಸಾರಿಗೆ ನೌಕರರ ನಿರ್ಧಾರ: ಸಂಧಾನ ಸಭೆ ಇಂದು

Last Updated 7 ಮಾರ್ಚ್ 2023, 19:31 IST
ಅಕ್ಷರ ಗಾತ್ರ

ಬೆಂಗಳೂರು: ಸಾರಿಗೆ ಸಂಸ್ಥೆಗಳ ನೌಕರರು ಮುಷ್ಕರಕ್ಕೆ ಕರೆ ನೀಡಿದ ಬೆನ್ನಲ್ಲೇ ಸಾರಿಗೆ ಸಚಿವ ವಿ.ಶ್ರೀರಾಮುಲು ಅವರು ನೌಕರರ ಸಂಘಟನೆಗಳ ಸಭೆ ಕರೆದಿದ್ದಾರೆ.

ಬುಧವಾರ (ಮಾ.8) ಸಂಜೆ 6.30ಕ್ಕೆ ವಿಕಾಸಸೌಧದಲ್ಲಿ ಸಭೆ ನಡೆಯಲಿದ್ದು, ನೌಕರರ ಮನವೊಲಿಸುವ ಕಸರತ್ತನ್ನು ಸರ್ಕಾರ ನಡೆಸಲಿದೆ.

ಮಾರ್ಚ್‌ 1ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದ ನೌಕರರು, ಸಮಾನ ವೇತನದ ಬೇಡಿಕೆ ಈಡೇರಿಸಲು ಮಾ.4ರ ಸಂಜೆ 5 ಗಂಟೆ ತನಕ ಗಡುವು ನೀಡಿದ್ದರು. ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದರಿಂದ ಮಾರ್ಚ್ 24 ರಿಂದ ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ನಿರ್ಧರಿಸಿತ್ತು.

‘ಈಗ ಎಚ್ಚೆತ್ತುಕೊಂಡಿರುವ ಸರ್ಕಾರ ಸಭೆ ಕರೆದಿದೆ. ಆರನೇ ವೇತನ ಆಯೋಗ ಜಾರಿ ಮತ್ತು ಸರ್ಕಾರಿ ನೌಕರರ ವೇತನಕ್ಕೆ ಸಮನಾದ ವೇತನ ಜಾರಿ ಮಾಡಬೇಕು ಎಂಬ ಬೇಡಿಕೆಯನ್ನು ಸಚಿವರ ಮುಂದೆ ಇಡುತ್ತೇವೆ. ಸರ್ಕಾರದಿಂದ ಸಹಮತ ದೊರಕದಿದ್ದರೆ ನಿಗದಿಯಂತೆ ಮಾ.24 ರಿಂದ ಸಾರಿಗೆ ಮುಷ್ಕರ ಆರಂಭವಾಗಲಿದೆ’ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಆರ್. ಚಂದ್ರಶೇಖರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT