ಕಲಬುರ್ಗಿ: ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಡಿಸಿಎಂ ಹುದ್ದೆಯನ್ನು ವಾಲ್ಮೀಕಿ ಸಮುದಾಯಕ್ಕೆ ನೀಡಬೇಕು ಎಂದು ವಾಲ್ಮೀಕಿ ಪೀಠದ ಸ್ವಾಮೀಜಿ ಅವರು ಹೇಳಿದ್ದಾರೆ. ಆದಾಗ್ಯೂ ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಅವರು ದೆಹಲಿಗೆ ತೆರಳಿದ್ದಾರೆ.
ತಿಂಗಳ ಕೊನೆಯಲ್ಲಿ ಅಥವಾ ಫೆಬ್ರವರಿ ಮೊದಲವಾರ ಸಂಪುಟ ವಿಸ್ತರಣೆಯಾಗಲಿದೆ. ಉಪ ಮುಖ್ಯಮಂತ್ರಿ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ. ಪಕ್ಷದ ತೀರ್ಮಾನಕ್ಕೆ ನಾವು ಬದ್ದ. ಪಕ್ಷಕ್ಕೆ ಯಾರಿಗೆ ಏನು ಮಾಡಬೇಕು ಅಂತ ಗೊತ್ತಿದೆ’ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವೈದ್ಯರ ನೇಮಕಕ್ಕೆ ಸಂಪುಟ ಒಪ್ಪಿಗೆ: ನೇರ ನೇಮಕಾತಿ ಮೂಲಕ ಎರಡು ಸಾವಿರಕ್ಕೂ ಹೆಚ್ಚು ವೈದ್ಯರ ನೇಮಕಕ್ಕೆ ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ಪಡೆಯಲಾಗಿದೆ. ಆದಷ್ಟು ಬೇಗನೆ ವೈದ್ಯರ ನೇಮಕವಾಗಲಿದೆ ಎಂದು ಶ್ರೀರಾಮುಲು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.