ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಘಟಕಗಳ ಪುನರ್‌ರಚನೆ: ಅರುಣ್ ಸಿಂಗ್‌ ಜತೆಗೆ ವಿಜಯೇಂದ್ರ ಚರ್ಚೆ

Published 8 ಡಿಸೆಂಬರ್ 2023, 13:27 IST
Last Updated 8 ಡಿಸೆಂಬರ್ 2023, 13:27 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಎಲ್ಲ ಘಟಕಗಳ ಪುನರ್ ರಚನೆ ಸಂಬಂಧ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಜತೆಗೆ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಶುಕ್ರವಾರ ಸಮಾಲೋಚನೆ ನಡೆಸಿದರು. 

ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಯಾವುದೇ ಘಟಕಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿರಲಿಲ್ಲ. ಸಕ್ರಿಯವಾಗಿ ಕಾರ್ಯ ನಿರ್ವಹಿಸುವವರು ಮತ್ತು ಕ್ರಿಯಾಶೀಲರಿಗೆ ಹೆಚ್ಚಿನ ಆದ್ಯತೆ ನೀಡಲು ಘಟಕಗಳ ಪುನರ್‌ ರಚನೆಗೆ ನಿರ್ಧರಿಸಲಾಗಿದೆ. ಈ ಕುರಿತು ಅರುಣ್‌ ಸಿಂಗ್‌ ಜತೆಗೆ ಚರ್ಚಿಸುವಂತೆ ವಿಜಯೇಂದ್ರ ಅವರಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚಿಸಿದ್ದರು. 

‘ಪಕ್ಷದ ಹಿರಿಯ ನಾಯಕರೊಂದಿಗೆ ಸಮಾಲೋಚಿಸಿ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಈ ಪಟ್ಟಿಯನ್ನು ಅರುಣ್ ಸಿಂಗ್ ಅವರಿಗೆ ನೀಡಲಾಗಿದೆ. ಅವರು ವರಿಷ್ಠರೊಂದಿಗೆ ಸಮಾಲೋಚನೆ ನಡೆಸುವರು. ಮಧ್ಯ ಪ್ರದೇಶ, ರಾಜಸ್ಥಾನ, ಛತ್ತೀಸಗಢ ರಾಜ್ಯಗಳಿಗೆ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಮುಗಿದ ಬಳಿಕ ವರಿಷ್ಠರು ಚರ್ಚಿಸಿ ಪಟ್ಟಿಗೆ ಅಂತಿಮ ರೂಪ ನೀಡಲಿದ್ದಾರೆ’ ಎಂದು ವಿಜಯೇಂದ್ರ ತಿಳಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT