ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗೇಂದ್ರ ರಾಜೀನಾಮೆ | ಬಿಜೆಪಿ ಹೋರಾಟಕ್ಕೆ ಸಿಕ್ಕ ಜಯ: ಬಿ.ವೈ.ವಿಜಯೇಂದ್ರ

Published 6 ಜೂನ್ 2024, 23:37 IST
Last Updated 6 ಜೂನ್ 2024, 23:37 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಜೆಪಿ ಹೋರಾಟದ ಹಾದಿ ತುಳಿಯುತ್ತಿದ್ದಂತೆ ಭಂಡತನಕ್ಕೆ ಜೋತು ಬಿದ್ದಿದ್ದ ಕಾಂಗ್ರೆಸ್‌ ಸರ್ಕಾರ ಕೊನೆಗೂ ಸಚಿವ ಬಿ.ನಾಗೇಂದ್ರ ಅವರಿಂದ ರಾಜೀನಾಮೆ ಪಡೆದುಕೊಂಡಿದೆ. ಪರಿಶಿಷ್ಟ ಪಂಗಡ ಕಲ್ಯಾಣ ಕಾರ್ಯಕ್ಕೆ ಬಗೆದಿದ್ದ ದ್ರೋಹದ ವಿರುದ್ಧ ಬಿಜೆಪಿ ಹೋರಾಟಕ್ಕೆ ಸಿಕ್ಕ ಜಯ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಈ ಕುರಿತು ‘ಎಕ್ಸ್’ ಮೂಲಕ ಪ್ರತಿಕ್ರಿಯಿಸಿರುವ ಅವರು, ‘ಸದ್ಯ ನಾಗೇಂದ್ರ ರಾಜೀನಾಮೆ ಮೊದಲ ಘಟ್ಟವಾಗಿದ್ದು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಲೂಟಿಯಾದ ₹187 ಕೋಟಿ ಹಗರಣದಲ್ಲಿ ಇನ್ನಷ್ಟು ಪ್ರಭಾವಿಗಳ ಕೈವಾಡ ಅಡಗಿರುವ ಸಾಧ್ಯತೆಯನ್ನು ನಿರಾಕರಿಸಲಾಗದು. ಈ ನಿಟ್ಟಿನಲ್ಲಿ ಪಾರದರ್ಶಕ ತನಿಖೆಯನ್ನು ಬಿಗಿಗೊಳಿಸಬೇಕಾಗಿದೆ’ ಎಂದು ಒತ್ತಾಯಿಸಿದ್ದಾರೆ.

‘ತನಿಖೆ ಕಾರ್ಯ ಚುರುಕುಗೊಳ್ಳಲು ರಾಜ್ಯ ಸರ್ಕಾರ ಪೂರ್ಣ ಸಹಕಾರ ನೀಡುವುದು ಅದರ ನೈತಿಕ ಹೊಣೆಯಾಗಿದೆ. ಹಗರಣದ ಸತ್ಯಾಂಶ ಪೂರ್ಣ ಪ್ರಮಾಣದಲ್ಲಿ ಹೊರಬಂದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವವರೆಗೂ ಬಿಜೆಪಿ ಹೋರಾಟ ನಿಲ್ಲದು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT