ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಿ ನ.15ರಂದು ಅಧಿಕಾರ ಸ್ವೀಕಾರ: ಬಿ.ವೈ ವಿಜಯೇಂದ್ರ

ಸಿದ್ಧಗಂಗಾ ಮಠಕ್ಕೆ ವಿಜಯೇಂದ್ರ ಭೇಟಿ– ನ.15 ರಂದು ಅಧಿಕಾರ ಸ್ವೀಕಾರ
Published 12 ನವೆಂಬರ್ 2023, 7:53 IST
Last Updated 12 ನವೆಂಬರ್ 2023, 7:53 IST
ಅಕ್ಷರ ಗಾತ್ರ

ತುಮಕೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಿ ನ.15ರಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಾಗುವುದು. 16ರಂದು ಅರಮನೆ ಮೈದಾನದಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ನಗರದ ಸಿದ್ಧಗಂಗಾ ಮಠಕ್ಕೆ ಭಾನುವಾರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನ ಪಡೆದ ನಂತರ ಸುದ್ದಿಗಾರರ ಜತೆ ಮಾತನಾಡಿದರು.

ಪಕ್ಷದ ಎಲ್ಲ ಹಿರಿಯರ ಸಮ್ಮುಖದಲ್ಲಿ ಜವಾಬ್ದಾರಿ ಸ್ವೀಕರಿಸಲಾಗುವುದು. ಪಂಚ ರಾಜ್ಯಗಳ ಚುನಾವಣೆ ಇರುವುದರಿಂದ ರಾಷ್ಟ್ರೀಯ ನಾಯಕರು ಕಾರ್ಯಕ್ರಮಕ್ಕೆ ಬರುವುದಿಲ್ಲ. ನ.16 ಅಥವಾ 17ರಂದು ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ಕೇಂದ್ರ ವೀಕ್ಷಕರು ಬರುವ ಸಾಧ್ಯತೆಗಳಿವೆ. ರೈತರಿಗೆ ಬರ ಪರಿಹಾರ ಕೊಡಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು.

 ಸಿದ್ಧಗಂಗಾ ಮಠಕ್ಕೆ ವಿಜಯೇಂದ್ರ ಭೇಟಿ

ಸಿದ್ಧಗಂಗಾ ಮಠಕ್ಕೆ ವಿಜಯೇಂದ್ರ ಭೇಟಿ

ದೊಡ್ಡ ಪಕ್ಷದಲ್ಲಿ ಒಂದು ನಿರ್ಣಯ ಕೈಗೊಂಡಾಗ ಸಣ್ಣಪುಟ್ಟ ವ್ಯತ್ಯಾಸಗಳು ಆಗುತ್ತವೆ. ಪಕ್ಷದ ಕೆಲವು ನಾಯಕರಲ್ಲಿ ಅಸಮಾಧಾನಗಳಿವೆ. ಮುಂದಿನ ದಿನಗಳಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲಾಗುವುದು. ಎಲ್ಲರನ್ನು ಒಗ್ಗೂಡಿಸಿಕೊಂಡು, ಹಿರಿಯರ ಆಶೀರ್ವಾದ, ಮಾರ್ಗದರ್ಶನದಲ್ಲಿ ಪಕ್ಷ ಸಂಘಟಿಸಲಾಗುವುದು ಎಂದರು.

ಪಕ್ಷದಲ್ಲಿ ಯಾರನ್ನು ಸೈಡ್‌ಲೈನ್‌ ಮಾಡಿಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮೇಲೆ ಮತ್ತಷ್ಟು ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ಚುನಾವಣೆಯ ಸಮಯದಲ್ಲಿ ರಾಜ್ಯದಾದ್ಯಂತ ಪ್ರವಾಸ ಕೈಗೊಂಡಿದ್ದರು. ವಿರೋಧ ಪಕ್ಷದ ನಾಯಕನ ಆಯ್ಕೆಯ ನಂತರ ದೆಹಲಿಗೆ ಭೇಟಿ ನೀಡಿ, ಪಕ್ಷದ ನಾಯಕರ ಜತೆ ಲೋಕಸಭಾ ಚುನಾವಣೆಯ ವಿಚಾರವಾಗಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT