ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BSY ಪುತ್ರ ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ
Published 10 ನವೆಂಬರ್ 2023, 13:02 IST
Last Updated 10 ನವೆಂಬರ್ 2023, 13:21 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ಬಿ.ವೈ.ವಿಜಯೇಂದ್ರ ಅವರನ್ನು ನಿಯೋಜಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶಿಸಿದ್ದಾರೆ.

ನಿಕಟಪೂರ್ವ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಅವಧಿ ಎರಡು ವರ್ಷಗಳ ಹಿಂದೆ ಪೂರ್ಣಗೊಂಡಿತ್ತು. ನಂತರ ಪಕ್ಷದ ವರಿಷ್ಠರ ಸೂಚನೆಯಂತೆ ಅವರು ಹುದ್ದೆಯಲ್ಲಿ ಮುಂದುವರಿದಿದ್ದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲು ಮತ್ತು ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪ್ರಭಾವವನ್ನು ರಾಜ್ಯದಲ್ಲಿ ಹೆಚ್ಚಿಸುವ ನಿಟ್ಟಿನಲ್ಲಿ ಸಮರ್ಥ ನಾಯಕರ ಹುಡುಕಾಟವನ್ನು ಪಕ್ಷ ನಡೆಸಿತ್ತು.

ಶಿಕಾರಿಪುರ ಶಾಸಕರಾಗಿರುವ ವಿಜಯೇಂದ್ರ ಅವರ ಹೆಸರು ಅಧ್ಯಕ್ಷ ಹುದ್ದೆಗೆ ಕೇಳಿಬಂದಿತ್ತು. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಹಾಗೂ ವಿರೋಧ ಪಕ್ಷದ ನಾಯಕರ ನೇಮಕ ಮಾಡದ ಕುರಿತು ಪಕ್ಷದ ವಲಯದಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಕಾಂಗ್ರೆಸ್‌ ನಾಯಕರು ಬಿಜೆಪಿ ನಾಯಕರ ಕಾಲೆಳೆದಿದ್ದರು.

ಪಕ್ಷದ ಅಧ್ಯಕ್ಷರ ನೇಮಕ ಹಾಗೂ ವಿರೋಧ ಪಕ್ಷದ ನಾಯಕರ ಶೀಘ್ರ ನೇಮಕಕ್ಕೆ ರಾಷ್ಟ್ರನಾಯಕರನ್ನು ಒತ್ತಾಯಿಸಿರುವುದಾಗಿ ಇತ್ತೀಚೆಗೆ ಬಿ.ಎಸ್.ಯಡಿಯೂರಪ್ಪ ಹೇಳಿದ್ದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆದೇಶದಂತೆ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ವಿಜಯೇಂದ್ರ ಅವರನ್ನು ನೇಮಿಸಿದ್ದಾರೆ.

ಬಿ.ವೈ.ವಿಜಯೇಂದ್ರ ಅವರ ನೇಮಕ ಆದೇಶ ಪ್ರತಿ

ಬಿ.ವೈ.ವಿಜಯೇಂದ್ರ ಅವರ ನೇಮಕ ಆದೇಶ ಪ್ರತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT