ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬಾಬುಡನ್ ಗಿರಿ: ಸಂಪುಟ ಉಪ ಸಮಿತಿ ರಚನೆ

Published 17 ಜನವರಿ 2024, 16:10 IST
Last Updated 17 ಜನವರಿ 2024, 16:10 IST
ಅಕ್ಷರ ಗಾತ್ರ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಇನಾಂ ದತ್ತಾತ್ರೇಯ ಪೀಠದ ಶ್ರೀ ಗುರುದತ್ತಾತ್ರೇಯ ಬಾಬಾ ಬುಡನ್‌ ಸ್ವಾಮಿ ದರ್ಗಾದ ಸಂಸ್ಥೆಗೆ ಸಂಬಂಧಿಸಿದಂತೆ ಸಯ್ಯದ್‌ ಗೌಸ್‌ ಮೊಹಿಯುದ್ದೀನ್‌ ಶಾಖಾದ್ರಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿಲುವು ತಿಳಿಸಲು ಗೃಹ ಸಚಿವ ಜಿ. ಪರಮೇಶ್ವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚಿಸಲು ನಿರ್ಧರಿಸಲಾಗಿದೆ.

ಈ ಕುರಿತು ಕಂದಾಯ ಇಲಾಖೆ (ಧಾರ್ಮಿಕ ದತ್ತಿ) ಸಂಪುಟ ಸಭೆಗೆ ಪ್ರಸ್ತಾವ ಮಂಡಿಸಿದೆ.

‘ಈ ಪ್ರಕರಣದಲ್ಲಿ ಹೈಕೋರ್ಟ್‌ 2023ರ ಮಾರ್ಚ್‌ 6ರಂದು ನೀಡಿರುವ ತೀರ್ಪನ್ನು ಪ್ರಶ್ನಿಸಿ ಶಾಖಾದ್ರಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಲಿಖಿತ ಹೇಳಿಕೆಗಳನ್ನು ಸಲ್ಲಿಸಿ, ಪ್ರಮಾಣಪತ್ರದ ಮೂಲಕ ಸರ್ಕಾರ ನಿಲುವು ತಿಳಿಸಬೇಕಾಗಿದೆ. ಪ್ರಕರಣದಲ್ಲಿನ ಎಲ್ಲ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಶೀಘ್ರದಲ್ಲಿ ಶಿಫಾರಸುಗಳನ್ನು ಸಲ್ಲಿಸಲು ಗೃಹ ಸಚಿವರ ಅಧ್ಯಕ್ಷತೆಯಲ್ಲಿ, ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರನ್ನು ಒಳಗೊಂಡ ಸಚಿವ ಸಂಪುಟ ಉಪ ಸಮಿತಿ ರಚಿಸುವಂತೆ ಸೂಚಿಸಿದ್ದಾರೆ’ ಎಂದು ಮುಜರಾಯಿ ಇಲಾಖೆಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT