ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2 ತಿಂಗಳ ಮಗುವನ್ನು ಸಾಹಸದಿಂದ ರಕ್ಷಿಸಿದ ಎನ್‌ಡಿಆರ್‌ಎಫ್‌ ಸಿಬ್ಬಂದಿ

Last Updated 20 ಆಗಸ್ಟ್ 2018, 8:51 IST
ಅಕ್ಷರ ಗಾತ್ರ

ಮಡಿಕೇರಿ: ರಭಸದಿಂದ ಹರಿಯುತ್ತಿರುವ ನದಿ ಮೇಲೆ ಎರಡು ತಿಂಗಳ ಮಗುವನ್ನು ಎದೆಗವಚಿಕೊಂಡು ಎನ್‌ಡಿಆರ್‌ಎಫ್‌ (ರಾಷ್ಟ್ರೀಯ ವಿಪತ್ತು ರಕ್ಷಣಾಪಡೆ) ಸಿಬ್ಬಂದಿಯೊಬ್ಬರುತಂತಿ ಮೂಲಕ ರಕ್ಷಣಾ ಕಾರ್ಯಾಚರಣೆ ಮಾಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಮಡಿಕೇರಿಯ ತಂತಿಪಾಲ ಎಂಬಲ್ಲಿ ಕಾರವಾರದಿಂದ ಬಂದ ರಕ್ಷಣಾ ಪಡೆ ಸಿಬ್ಬಂದಿಗಳು ಸಾಹಸಮಯ ರೀತಿಯಲ್ಲಿ ಮಗುವನ್ನು ರಕ್ಷಿಸಿದ್ದಾರೆ.ದಡ ಸೇರಿದ ಮೇಲೆ ಮಗುವನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಿ ಹೆತ್ತವರಿಗೆ ಒಪ್ಪಿಸಲಾಗಿದೆ.

ಮಗುವನ್ನು ರಕ್ಷಿಸುತ್ತಿರುವ ಈ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದ್ದು, ಮುಖ್ಯಮಂತ್ರಿ ಈ ವಿಡಿಯೊವನ್ನು ಟ್ವೀಟ್ ಮಾಡಿದ್ದಾರೆ.

ಭಾನುವಾರ ಸಂಜೆ ಪ್ರವಾಹ ಪೀಡಿತ ಕೊಡಗು ಜಿಲ್ಲೆಯಲ್ಲಿ 3,500 ಮಂದಿಯನ್ನು ರಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT