ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಕೊಡುವ ಶಕ್ತಿಗಳ ಹಿಮ್ಮೆಟ್ಟಿಸಿ: ಸಿದ್ದರಾಮಯ್ಯ

Published : 5 ಸೆಪ್ಟೆಂಬರ್ 2024, 20:37 IST
Last Updated : 5 ಸೆಪ್ಟೆಂಬರ್ 2024, 20:37 IST
ಫಾಲೋ ಮಾಡಿ
Comments

ಬೆಂಗಳೂರು: ‘ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಕೊಡುವ ಶಕ್ತಿಗಳನ್ನು ಮೆಟ್ಟಿ ನಾವು ನಿಲ್ಲಬೇಕು. ಪ್ರಜಾಪ್ರಭುತ್ವವಾದಿಗಳ ಹೋರಾಟ ಯಶಸ್ವಿ ಆಗಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆಪ್ಟೆಂಬರ್‌ 15ರಂದು ಬೀದರ್‌ನಿಂದ ಚಾಮರಾಜನಗರ ವರೆಗೆ 2,500 ಕಿ.ಮೀ ಉದ್ದದ ಮಾನವ ಸರಪಳಿ ಮತ್ತು ಪ್ರಜಾಪ್ರಭುತ್ವ ಸಂಭ್ರಮ ಆಚರಣೆ ಕುರಿತಂತೆ ವಿಧಾನಸೌಧದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಈ ಮಾನವ ಸರಪಳಿ ಚಳವಳಿಯಲ್ಲಿ ವಿಧಾನಸೌಧದ ಎದುರು ನಾನು ಭಾಗವಹಿಸುತ್ತೇನೆ. ಇದರಲ್ಲಿ ಎಲ್ಲರೂ ಭಾಗವಹಿಸಬೇಕು’ ಎಂದೂ ಮನವಿ ಮಾಡಿದರು.

‘ಪ್ರಜಾಪ್ರಭುತ್ವ ನಾಶ ಮಾಡಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳ ಸಂಖ್ಯೆ ಕಡಿಮೆ ಇದ್ದರೂ ಹೆಚ್ಚು ಚಟುವಟಿಕೆ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವವಾದಿಗಳು ಹೆಚ್ಚು ಪ್ರಮಾಣದಲ್ಲಿದ್ದರೂ ಕ್ರಿಯಾಶೀಲವಾಗಿಲ್ಲ. ಪ್ರಜಾಪ್ರಭುತ್ವ, ಸಂವಿಧಾನ ಉಳಿದರೆ ಮಾತ್ರ ದೇಶದ ಅಭಿವೃದ್ಧಿ ಮತ್ತು ಸಾಮಾಜಿಕ ಬದಲಾವಣೆ ಸಾಧ್ಯ’ ಎಂದರು.

ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಕ್ಫ್ ಸಚಿವ ರಹೀಂ ಖಾನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT