795 ಹುದ್ದೆ ಭರ್ತಿಗೆ ವಿನಾಯಿತಿ ಕೋರಿಕೆ
2015ನೇ ಸಾಲಿನಿಂದ ಇಲ್ಲಿಯವರೆಗೆ ಮುಚ್ಚಿರುವ ಹಾಗೂ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಕಾರಣಕ್ಕೆ ಒಟ್ಟು 795 ಹುದ್ದೆಗಳನ್ನು ಭರ್ತಿ ಮಾಡುವುದರಿಂದ ವಿನಾಯಿತಿ ನೀಡುವಂತೆ 26 ವಿವಿಧ ಇಲಾಖೆಗಳ ಮುಖ್ಯಸ್ಥರು ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಅಧ್ಯಕ್ಷತೆಯಲ್ಲಿ ಈ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ, ಯಾವ ಕಾರಣಕ್ಕೂ ಈ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯ ಇಲ್ಲವೆಂದು ವರದಿ ಪಡೆಯಲು ಸಚಿವ ಸಂಪುಟ ಉಪ ಸಮಿತಿ ನಿರ್ಧರಿಸಿದೆ.