ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

160 ಕಡೆಗಳಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಹಾಸ್ಟೆಲ್

Published 5 ಜುಲೈ 2023, 16:11 IST
Last Updated 5 ಜುಲೈ 2023, 16:11 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ 160 ಕಡೆಗಳಲ್ಲಿ ಉನ್ನತ ಶಿಕ್ಷಣ ಇಲಾಖೆ ಸೇರಿದ ಕಟ್ಟಡಗಳಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳನ್ನು ಆರಂಭಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್‌ ಎಸ್‌. ತಂಗಡಗಿ ಹೇಳಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಕಿರಣ್‌ ಕುಮಾರ್‌ ಕೊಡ್ಗಿ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿ ಅವರು ಈ ವಿಷಯ ತಿಳಿಸಿದರು.

ರಾಜ್ಯದಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಈ ವ್ಯವಸ್ಥೆ ಮಾಡಲಾಗುವುದು. ಈ ಹಾಸ್ಟೆಲ್‌ಗಳಲ್ಲಿ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಹೆಚ್ಚು ವಿದ್ಯಾರ್ಥಿಗಳು ಹಾಸ್ಟೆಲ್‌ಗೆ ಬಂದು ಸೇರುತ್ತಿದ್ದಾರೆ. ಹಾಸ್ಟೆಲ್ ಸಿಗದವರಿಗೆ ವಿದ್ಯಾಸಿರಿ ಯೋಜನೆಯಡಿ ತಿಂಗಳಿಗೆ ₹1,500 ನೀಡಲಾಗುವುದು ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT