ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ಪ್ರಕರಣ: ಸಿದ್ದರಾಮಯ್ಯ ಬೆನ್ನಿಗೆ ನಿಂತ 10 ಮಠಾಧೀಶರು

Published : 25 ಆಗಸ್ಟ್ 2024, 15:21 IST
Last Updated : 25 ಆಗಸ್ಟ್ 2024, 15:21 IST
ಫಾಲೋ ಮಾಡಿ
Comments

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಕಾಂಗ್ರೆಸ್‌ ಪಕ್ಷ ಮತ್ತು ಹಲವು ಸಂಘಟನೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದು, ಈಗ ಹಿಂದುಳಿದ ವರ್ಗ, ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಕೂಡಾ ಅವರಿಗೆ ನೈತಿಕ ಬೆಂಬಲ ನೀಡಿದೆ.

ಸಿದ್ದರಾಮಯ್ಯ ಅವರನ್ನು ‘ಕಾವೇರಿ’ ನಿವಾಸದಲ್ಲಿ ಭಾನುವಾರ ಭೇಟಿ ಮಾಡಿದ 10 ಸ್ವಾಮೀಜಿಗಳನ್ನು ಒಳಗೊಂಡ ನಿಯೋಗ, ಸಿದ್ದರಾಮಯ್ಯ ಅವರಿಗೆ ಆತ್ಮಸ್ಥೈರ್ಯ ತುಂಬಿತು. ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಖಾಸಗಿ ದೂರು ಆಧರಿಸಿ ವಿಚಾರಣೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮವನ್ನು ನಿಯೋಗದಲ್ಲಿದ್ದ ಸ್ವಾಮೀಜಿಗಳು ಖಂಡಿಸಿದರು.

‘ಪ್ರಜಾಸತ್ತಾತ್ಮಕ ರೀತಿಯಲ್ಲಿ ಜನರಿಂದ ಚುನಾಯಿತವಾದ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಮಾಡುತ್ತಿವೆ. ಕೇಂದ್ರ ಸರ್ಕಾರ ಹಾಗೂ ರಾಜಭವನ ಷಡ್ಯಂತ್ರ ನಡೆಸಿವೆ. ಸರ್ಕಾರ ಪತನಗೊಳಿಸುವ, ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಪ್ರಯತ್ನ ಮುಂದುವರಿಸಿದರೆ ಹೋರಾಟ ನಡೆಸಲಾಗುತ್ತದೆ’ ಎಂದು ಎಚ್ಚರಿಸಿದರು. 

ಮಾದರ ಚನ್ನಯ ಗುರುಪೀಠದ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ, ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಈಶ್ವರಾನಂದಪುರಿ ಮಹಾಸ್ವಾಮೀಜಿ, ಕನಕ ಗುರುಪೀಠ ಕುಂಚಿಟಿಗ ಮಹಾ ಸಂಸ್ಥಾನ ಮಠದ ಶಾಂತವೀರ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ನಾರಾಯಣ ಗುರುಪೀಠ ರೇಣುಕಾನಂದ ಸ್ವಾಮೀಜಿ, ಮಡಿವಾಳ ಗುರುಪೀಠದ ಬಸವ ಮಾಚಿದೇವ ಸ್ವಾಮೀಜಿ,  ಹಡಪದ ಅಪ್ಪಣ್ಣ ಗುರುಪೀಠದ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಸರೂರು ಪೀಠದ ಶಾಂತಮ್ಮಯ್ಯ ಸ್ವಾಮೀಜಿ ನಿಯೋಗದಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT