ಬೆಂಗಳೂರು: ಎಚ್.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಟಿಕೆಟ್ಗಾಗಿ ಮೇಟಿ ಕುಟುಂಬದಲ್ಲಿ ಮುಸುಕಿನ ಕಾದಾಟ ನಡೆಯುತ್ತಿರುವುದು ಕಾಂಗ್ರೆಸ್ಗೆ ತಲೆನೋವಾಗಿ ಪರಿಣಮಿಸಿದೆ.

ಕಾಂಗ್ರೆಸ್ ಪಕ್ಷದಿಂದ ಮೇಟಿ ಕುಟುಂಬದವರಿಗೇ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ. ಆದರೆ, ಕುಟುಂಬದೊಳಗಿನ ಸಂಘರ್ಷ, ವಾರಸುದಾರಿಕೆಯ ಜಗಳ ಈಗ ಬೀದಿಗೆ ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಟಿ ಪುತ್ರರಾದ ಮಲ್ಲಿಕಾರ್ಜುನ, ಉಮೇಶ, ಪುತ್ರಿಯರಾದ ಬಾಯಕ್ಕ ಮತ್ತು ಮಹಾದೇವಿ ಜೊತೆ ಬುಧವಾರ ಮಾತುಕತೆ ನಡೆಸಿದರು. ಈ ವೇಳೆ, ‘ಕುಟುಂಬದವರೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ನಿಮ್ಮ ಮನೆಯಲ್ಲಿಯೇ ಒಬ್ಬರಿಗೆ ಟಿಕೆಟ್ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಗೊತ್ತಾಗಿದೆ.

‘ನೀವು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿದ್ದೇವೆ’ ಎಂದು ಮಲ್ಲಿಕಾರ್ಜುನ ಮೇಟಿ, ಉಮೇಶ ಮೇಟಿ ಮತ್ತು ಬಾಯಕ್ಕ ಮೇಟಿ ಮುಖ್ಯಮಂತ್ರಿಗೆ ತಿಳಿಸಿದ್ದಾರೆ. ಆದರೆ, ಮಹಾದೇವಿ ಮೇಟಿ ಮಾತ್ರ ‘ನನಗೇ ಟಿಕೆಟ್ ನೀಡಬೇಕು. ನನಗೆ ನೀಡದಿದ್ದರೆ, ಸಹೋದರ ಉಮೇಶ ಮೇಟಿಗೆ ನೀಡಬೇಕು. ನಮ್ಮಿಬ್ಬರಲ್ಲಿ ಒಬ್ಬರಿಗೆ ನೀಡದೇ ಇದ್ದರೆ ನಾನು ಸ್ಪರ್ಧೆ ಮಾಡುತ್ತೇನೆ’ ಎಂದು ಹೇಳಿದ್ದಾರೆಂದು ಗೊತ್ತಾಗಿದೆ.

ನಾಲ್ವರ ಅಭಿಪ್ರಾಯ ಪಡೆದ ಮುಖ್ಯಮಂತ್ರಿ, ‘ಎಲ್ಲರೂ ಒಗ್ಗಟ್ಟಿನಿಂದ ಹೋದರೆ ಒಳ್ಳೆಯದಾಗುತ್ತದೆ’ ಎಂದು ಸಲಹೆ ನೀಡಿದರು ಎಂದು ತಿಳಿದುಬಂದಿದೆ.

ಹಿರಿಯ ಪುತ್ರ ಮಲ್ಲಿಕಾರ್ಜುನ ಮೇಟಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಹೈಕಮಾಂಡ್ ಸಿದ್ಧತೆ ನಡೆಸಿರುವ ನಡುವೆ, ಉಮೇಶ ಟಿಕೆಟ್ ಆಕಾಂಕ್ಷಿಯಾಗಿರುವುದು ಮತ್ತು ಟಿಕೆಟ್ ಸಿಗದೇ ಇದ್ದರೆ ಬಂಡಾಯದ ಬಾವುಟ ಹಾರಿಸುವುದಾಗಿ ಕಿರಿಯ ಪುತ್ರಿ ಮಹಾದೇವಿ ಎಚ್ಚರಿಕೆ ನೀಡಿರುವುದು ಕಾಂಗ್ರೆಸ್ ವಲಯದಲ್ಲಿ ಚರ್ಚೆಯಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.