ಬಾಗಲಕೋಟೆ/ದಾವಣಗೆರೆ: ರಾಜ್ಯದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಸೋಮವಾರ (ಮೇ 4) ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.

ಶಾಸಕರಾಗಿದ್ದ ಎಚ್.ವೈ. ಮೇಟಿ ಅವರ ನಿಧನದಿಂದಾಗಿ ಬಾಗಲಕೋಟೆ ಕ್ಷೇತ್ರ ಹಾಗೂ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ದಾವಣಗೆರೆ ದಕ್ಷಿಣ ಕ್ಷೇತ್ರವು ತೆರವಾಗಿತ್ತು. ಏಪ್ರಿಲ್ 9ರಂದು ಉಭಯ ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು.

ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಬೆಳಿಗ್ಗೆ 8ಕ್ಕೆ ಎಣಿಕೆ ಕಾರ್ಯ ಆರಂಭವಾಗಲಿದೆ. ಮತಎಣಿಕೆಗೆ 14 ಟೇಬಲ್ಗಳನ್ನು ವ್ಯವಸ್ಥೆ ಮಾಡಲಾಗಿದೆ. 23 ಸುತ್ತಗಳಲ್ಲಿ ಎಣಿಕೆ ನಡೆಯಲಿದೆ. 80 ವರ್ಷ ಮೇಲ್ಪಟ್ಟ ಹಿರಿಯ ಮತದಾರರು, ಅಂಚೆ ಮತ ಪತ್ರಗಳ ಎಣಿಕೆಗೆ ಪ್ರತ್ಯೇಕ ಟೇಬಲ್ ವ್ಯವಸ್ಥೆ ಮಾಡಲಾಗಿದೆ.

ಕಾಂಗ್ರೆಸ್ನಿಂದ ಉಮೇಶ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ಸ್ಪರ್ಧಿಸಿದ್ದರು. ಉಳಿದಂತೆ ಏಳು ಅಭ್ಯರ್ಥಿಗಳು ಕಣದಲ್ಲಿದ್ದರು. ಉಪ ಚುನಾವಣೆಯಲ್ಲಿ ಶೇ68.62ರಷ್ಟು ಮತದಾನವಾಗಿದ್ದು, 2,59,797 ಮತದಾರರಲ್ಲಿ 1,78,273 ಮಂದಿ ಹಕ್ಕು ಚಲಾಯಿಸಿದ್ದರು.

ದಾವಣಗೆರೆ ವರದಿ: ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯು ನಗರದ ಡಿಆರ್ಆರ್ ಕಾಲೇಜಿನಲ್ಲಿ ನಡೆಯಲಿದೆ.

ಒಟ್ಟು 14 ಟೇಬಲ್ಗಳನ್ನು ಎಣಿಕೆ ಕಾರ್ಯಕ್ಕಾಗಿ ವ್ಯವಸ್ಥೆ ಮಾಡಿದ್ದು, 21 ಸುತ್ತುಗಳಲ್ಲಿ ಈ ಪ್ರಕ್ರಿಯೆ ನಡೆಯಲಿದೆ. ಚುನಾವಣಾ ಸಿಬ್ಬಂದಿ, ಅಭ್ಯರ್ಥಿ ಹಾಗೂ ಏಜೆಂಟರಿಗೆ ಇದೇ ಮೊದಲ ಬಾರಿಗೆ ‘ಕ್ಯೂಆರ್ ಕೋಡ್’ ಆಧಾರಿತ ಗುರುತಿನ ಚೀಟಿಗಳನ್ನು ನೀಡಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹಾಗೂ ಬಿಜೆಪಿ ಉಮೇದುವಾರ ಟಿ. ಶ್ರೀನಿವಾಸ ದಾಸಕರಿಯಪ್ಪ ಸೇರಿ 25 ಹುರಿಯಾಳುಗಳ ಕಣದಲ್ಲಿದ್ದಾರೆ.

ಕ್ಷೇತ್ರದ ಒಟ್ಟು 2,31,072 ಮತದಾರರಲ್ಲಿ 1,58,131 ಮತದಾರರು ಹಕ್ಕು ಚಲಾವಣೆ ಮಾಡಿದ್ದು, ಶೇ 68.43ರಷ್ಟು ಮತದಾನವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.