ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಒಂದು ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

Published : 18 ಸೆಪ್ಟೆಂಬರ್ 2024, 15:43 IST
Last Updated : 18 ಸೆಪ್ಟೆಂಬರ್ 2024, 15:43 IST
ಫಾಲೋ ಮಾಡಿ
Comments

ಬೆಂಗಳೂರು: ‘ಘನತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿ ನಿರ್ವಹಣೆ ಕೆಲಸಕ್ಕೆ ಸಂಬಂಧಿಸಿದಂತೆ ಲಂಚ ನೀಡಬೇಕು ಎಂದು ನನಗೆ ತೊಂದರೆಯೊಡ್ಡಿದ್ದಾರೆ’ ಎಂಬ ಆರೋಪದಡಿ ಗುತ್ತಿಗೆದಾರ ಚೆಲುವರಾಜು ದಾಖಲಿಸಿರುವ ಕ್ರಿಮಿನಲ್‌ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.

ಈ ಸಂಬಂಧ ಮುನಿರತ್ನ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಬುಧವಾರ ವಿಚಾರಣೆ ನಡೆಸಿದರು.

ಇದೇ ವೇಳೆ ಪರಿಶಿಷ್ಟ ಜಾತಿ ನಿಂದನೆ ಆರೋಪದಡಿ ವೇಲುನಾಯ್ಕರ್ ದಾಖಲಿಸಿರುವ ದೂರಿಗೆ ಸಂಬಂಧಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ನಿಂದನೆ ಪ್ರಕರಣದಲ್ಲಿ ನಿಯಮಿತ ಜಾಮೀನು ಅರ್ಜಿ ಮೇಲಿನ ವಿಚಾರಣೆ ಆಲಿಸಿ ಮುಕ್ತಾಯಗೊಳಿಸಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಆದೇಶ ಕಾಯ್ದಿರಿಸಿದರು.

ಮುನಿರತ್ನ ಪರ ಹೈಕೋರ್ಟ್‌ನ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಹಾಗೂ ಪ್ರಾಸಿಕ್ಯೂಷನ್‌ ಪರ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಸಿ.ಎಸ್.ಪ್ರದೀಪ್‌ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT