ಬೈಲಹೊಂಗಲ: ‘ಚಿತ್ರದುರ್ಗದಲ್ಲಿ ಮೇ 9ರಂದು ಆಯೋಜಿಸಲಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಬೈಲಹೊಂಗಲ ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಬಿಜೆಪಿ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಭಾಗವಹಿಸಲಿದ್ದಾರೆ’ ಎಂದು ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ ಹೇಳಿದರು.

ನಗರದ ವಿದ್ಯಾನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.

‘ಬಿ.ಎಸ್.ಯಡಿಯೂರಪ್ಪ ಅವರು ನುಡಿದಂತೆ ನಡೆದ ರಾಜಕಾರಣಿ. ಬೈಲಹೊಂಗಲ ಮತಕ್ಷೇತ್ರಕ್ಕೆ ಸಾಕಷ್ಟು ಅನುದಾನ ಕಲ್ಪಿಸಿ ಈ ನಾಡಿನ ಜನರ ಆಶೋತ್ತರಗಳನ್ನು ಈಡೇರಿಸಿದ್ದಾರೆ. ಅವರು ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿ 50 ವರ್ಷಗಳನ್ನು ಪೂರೈಸುತ್ತಿರುವ ಕಾರಣ ಅಭಿಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೈಲಹೊಂಗಲ ಕ್ಷೇತ್ರದಿಂದಲೂ ಭಾರೀ ಪ್ರಮಾಣದಲ್ಲಿ ಕಾರ್ಯಕರ್ತರನ್ನು ಕರೆದೊಯ್ಯಲು ಸಿದ್ಧತೆ ನಡೆದಿದೆ’ ಎಂದರು

‘ಬಿ.ಎಸ್. ಯಡಿಯೂರಪ್ಪ ಅವರು ಹೋರಾಟದ ರಾಜಕಾರಣದ ಮೂಲಕ ಸಾಮಾನ್ಯ ಕಾರ್ಯಕರ್ತನಿಂದ ರಾಜ್ಯದ ಮುಖ್ಯಮಂತ್ರಿಯಾಗಿ ಬೆಳೆದ ನಾಯಕರು. ರೈತರು, ಕಾರ್ಮಿಕರು, ಬಡವರು ಹಾಗೂ ಹಿಂದುಳಿದ ವರ್ಗಗಳ ಪರವಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ್ದಾರೆ. ಅವರ ಆಡಳಿತಾವಧಿಯಲ್ಲಿ ನೀರಾವರಿ, ಗ್ರಾಮೀಣ ಅಭಿವೃದ್ಧಿ, ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿತ್ತು. ರಾಜ್ಯದಲ್ಲಿ ಬಿಜೆಪಿಯನ್ನು ಸಂಘಟಿಸಿ ಬಲಿಷ್ಠಗೊಳಿಸುವಲ್ಲಿ ಯಡಿಯೂರಪ್ಪ ಅವರ ಪಾತ್ರ ಅನನ್ಯ. ಪಕ್ಷದ ಬೆಳವಣಿಗೆಗೆ ಅವರು ನೀಡಿದ ಕೊಡುಗೆ ಸದಾ ಸ್ಮರಣೀಯವಾಗಿರಲಿದೆ’ ಎಂದರು.

ಬಿಜೆಪಿ ನಿಕಟಪೂರ್ವ ಮಂಡಲ ಅಧ್ಯಕ್ಷ ಮಡಿವಾಳಪ್ಪ ಹೋಟಿ, ಮುಖಂಡರಾದ ಮುರಗೇಶ ಗುಂಡ್ಲೂರ, ಆನಂದ ಮೂಗಿ, ಚಂದನ ಕೌಜಲಗಿ, ಬಸವರಾಜ ನೇಸರಗಿ, ವಿಶಾಲ ಬೋಗೂರ, ಶಿವಪ್ರಸಾದ ಪಾಟೀಲ, ಶಿವು ಶಿರಸಂಗಿ, ಅಶೋಕ ಗುಂಡ್ಲೂರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-21-454715370

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.