ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವೇಷ ಹುಟ್ಟುಹಾಕುವ ಶಕ್ತಿಗಳಿಗೆ ಮಹತ್ವ ಬೇಡ: ಸಿಎಂ ಸಿದ್ದರಾಮಯ್ಯ

Published 29 ಜೂನ್ 2023, 16:29 IST
Last Updated 29 ಜೂನ್ 2023, 16:29 IST
ಅಕ್ಷರ ಗಾತ್ರ

ಬೆಂಗಳೂರು: ‘ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲರೂ ಮನುಷ್ಯರು. ಎಲ್ಲರೂ ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗುರುವಾರ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ನಮ್ಮ ನಮ್ಮಲ್ಲೇ ದ್ವೇಷ ಹುಟ್ಟುಹಾಕುವ ಅನೇಕ ಶಕ್ತಿಗಳಿವೆ. ಆ ಶಕ್ತಿಗಳು ಉದ್ದೇಶಪೂರ್ವಕವಾಗಿಯೇ ಅದನ್ನು ಮಾಡುತ್ತವೆ. ಅದಕ್ಕೆ ಸೊಪ್ಪು ಹಾಕುವುದಾಗಲಿ, ಮಹತ್ವ ನೀಡುವುದಾಗಲಿ ಮಾಡಬಾರದು’ ಎಂದರು.

‘ಮನುಷ್ಯರು ಪ್ರೀತಿ, ವಿಶ್ವಾಸದಿಂದ‌ ಮನುಷ್ಯರಂತೆ ಬದುಕುವ ವಾತಾವರಣ ನಿರ್ಮಿಸಬೇಕಿದೆ. ರಾಜ್ಯದ ಅಭಿವೃದ್ಧಿಯ ಜೊತೆಗೆ ಜನತೆಯೂ ಅಭಿವೃದ್ಧಿ ಆಗಬೇಕು. ದೇವರು ಎಲ್ಲರಿಗೂ ಸದ್ಬುದ್ದಿ ನೀಡಿ ಮನುಷ್ಯರಾಗಿ ಬಾಳುವ ಗುಣವನ್ನು ನೀಡಲಿ’ ಎಂದರು.

ತ್ಯಾಗದ ಸಂಕೇತ:

‘ಬಕ್ರೀದ್ ಹಬ್ಬ ತ್ಯಾಗದ ಸಂಕೇತ. ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT