ಬೆಂಗಳೂರು: ‘ಬಲ್ದೋಟಾ ಸ್ಟೀಲ್ ಅಂಡ್ ಪವರ್ ಲಿಮಿಟೆಡ್, ಕೊಪ್ಪಳದಲ್ಲಿ ಆರಂಭಿಸಲು ಹೊರಟಿರುವ ಉಕ್ಕು ತಯಾರಿಕಾ ಘಟಕವನ್ನು ನಿಲ್ಲಿಸಲು ಸಾಧ್ಯವಿಲ್ಲ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ಹೇಮಲತಾ ನಾಯಕ್ ಅವರು ಸೋಮವಾರ ನಿಯಮ 303ರ ಅಡಿ ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಎಂ.ಬಿ.ಪಾಟೀಲ ಅವರು, ‘ಈ ಘಟಕ ಆರಂಭಕ್ಕೆ ಅಗತ್ಯವಿರುವ ಪರಿಸರ ಮತ್ತು ಅರಣ್ಯ ಅನುಮತಿಗಳನ್ನು ಬಲ್ದೋಟಾ ಕಂಪನಿಯು ಕೇಂದ್ರ ಸರ್ಕಾರದಿಂದ 2021ರಲ್ಲೇ ಪಡೆದುಕೊಂಡಿದೆ’ ಎಂದರು.

‘ಈ ಘಟಕದಿಂದ ಪರಿಸರದ ಮೇಲೆ ಆಗುವ ಪರಿಣಾಮ ಕುರಿತು ಭಾರತೀಯ ವಿಜ್ಞಾನ ಸಂಸ್ಥೆಯ ಮೂಲಕ ಅಧ್ಯಯನ ನಡೆಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ₹50 ಲಕ್ಷ ತೆಗೆದಿರಿಸುವ ಪ್ರಸ್ತಾವವೂ ಇದೆ’ ಎಂದು ಸದನಕ್ಕೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.