ಬಳ್ಳಾರಿ: ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ (ಯಜ್ಞೋಪವೀತ) ತೆಗೆಸಿ ಅಪಮಾನಿಸಿರುವುದನ್ನು ಖಂಡಿಸಿ ಅಖಿಲ ಭಾರತೀಯ ಬ್ರಾಹ್ಮಣ ಮಹಾ ಸಂಘದ ನೇತೃತ್ವದಲ್ಲಿ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧೆಡೆ ಪರೀಕ್ಷಾ ಮೇಲ್ವಿಚಾರಕರು ಬಲವಂತವಾಗಿ ಜನಿವಾರ ಕತ್ತರಿಸಿರುವುದು ಸಂವಿಧಾನದ ಧಾರ್ಮಿಕ ಸ್ವಾತಂತ್ರ್ಯ ಮತ್ತು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಸಂಘವು ಆಕ್ರೋಶ ವ್ಯಕ್ತಪಡಿಸಿದೆ. ಜನಿವಾರವು ಕೇವಲ ದಾರವಲ್ಲ, ಅದು ವಿಪ್ರ ಸಮಾಜದ ಸಂಸ್ಕೃತಿ ಮತ್ತು ಶ್ರದ್ಧೆಯ ಪ್ರತೀಕವಾಗಿದೆ ಎಂದು ಮುಖಂಡರು ಪ್ರತಿಪಾದಿಸಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಘಟನೆಗೆ ಕಾರಣರಾದ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಯನ್ನು ತಕ್ಷಣ ಅಮಾನತುಗೊಳಿಸಬೇಕು ಹಾಗೂ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ವಿ.ಕೆ. ಕೃಷ್ಣ, ಡಾ. ವಿದ್ಯಾಧರ ಕಿನ್ಹಾಳ್, ಡಾ. ಬಿ.ಕೆ. ಸುಂದರ್, ಪತ್ರಕರ್ತ ಮಧುಸೂದನ್ ಕಾಡ್ಲೂರು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಈ ಘಟನೆಯು ವಿದ್ಯಾರ್ಥಿಗಳಿಗೆ ಉಂಟುಮಾಡಿರುವ ಮಾನಸಿಕ ಕಿರುಕುಳಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-25-117940999

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.