ಬಳ್ಳಾರಿ: ‘ಓಬುಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಮತ್ತು ಅದರ ಗುಂಪು ಕಂಪನಿಗಳು ನಡೆಸಿರುವ ಅಕ್ರಮ ಗಣಿಗಾರಿಕೆಯಿಂದ ಕರ್ನಾಟಕಕ್ಕೆ ಆಗಿರುವ ನಷ್ಟ ವಸೂಲು ಮಾಡಲು ಗಣಿ ಉದ್ಯಮಿ ಟಪಾಲ್ ಗಣೇಶ್ ಅವರು ಸೂಕ್ತ ದಾಖಲೆಗಳನ್ನು ಸಲ್ಲಿಸಿಲ್ಲ’ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರು ಏ. 9ರಂದು ಗಣಿ ಇಲಾಖೆಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವರದಿ ನೀಡಿದ್ದಾರೆ.

‘ಟಪಾಲ್ ಗಣೇಶ್ ರವರು ಓಬುಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಮತ್ತು ಅದರ ಗುಂಪು ಕಂಪನಿ (ಎಂಬಿಟಿ, ಹಿಂದ್ ಟ್ರೇಡರ್ಸ್, ಎನ್. ರತ್ನಯ್ಯ)ಗಳಿಂದ ₹884 ಕೋಟಿ ವಸೂಲಿ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮತ್ತು ಒಎಂಸಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸುಧಾಂಶು ದುಲಿಯಾ ನೇತೃತ್ವದ ಸಮಿತಿಗೆ ಮನವಿಗಳನ್ನು ಸಲ್ಲಿಸಿದ್ದಾರೆ. ಪತ್ರದಲ್ಲಿ ನಮೂದಿಸಿದಂತೆ ಒಎಂಸಿ ಗಣಿಗುತ್ತಿಗೆಯು ಆಂಧ್ರಪ್ರದೇಶ ರಾಜ್ಯದ ವ್ಯಾಪ್ತಿಗೆ ಬರುತ್ತಿದೆ. ಆಂಧ್ರ ಸರ್ಕಾರವು ಈ ಕುರಿತು ಕ್ರಮ ಕೈಗೊಳ್ಳಬೇಕಾಗಿರುತ್ತದೆ. ಗಡಿ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆ ಮಾಡಿರುವ ಬಗ್ಗೆ ಸಂಪೂರ್ಣ ದಾಖಲೆಗಳನ್ನು ಟಪಾಲ್ ಗಣೇಶ್ ರವರು ಸಲ್ಲಿಸಿರುವುದಿಲ್ಲ’ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕ ರಂಗಪ್ಪ ಅವರು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಆದರೆ, ನಷ್ಟ ವಸೂಲಿಗೆ ಸಂಬಂಧಿಸಿದಂತೆ 2025ರ ಆಗಸ್ಟ್ 18ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದ ಟಪಾಲ್ ಗಣೇಶ್, ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯ 2025ರ ಮೇ 6ರಂದು ಪ್ರಕಟಿಸಿದ್ದ ತೀರ್ಪಿನ ಪ್ರತಿಯನ್ನು ಲಗತ್ತಿಸಿದ್ದರು.

ಒಎಂಸಿ ಆಂಧ್ರ ಪ್ರದೇಶದಲ್ಲಿ ಗಣಿಗಳನ್ನು ಹೊಂದಿದ್ದರೂ, ಕರ್ನಾಟಕದ ಗಣಿಗಳಿಂದ ಅದಿರನ್ನು ಕದ್ದು ಸಾಗಿಸಿರುವುದಾಗಿಯೂ, ಅದಕ್ಕಾಗಿ ರಸ್ತೆಗಳನ್ನು ಮಾಡಿಕೊಂಡಿದ್ದಾಗಿಯೂ, ಹೀಗೆ ಅಕ್ರಮವಾಗಿ ಸಾಗಿಸಿದ ಅದಿರನ ಪ್ರಮಾಣ ಒಟ್ಟು 28,49,613 ಟನ್ಗಳಾಗಿದ್ದು, ಅದರ ಒಟ್ಟು ಮೌಲ್ಯ ₹884.13 ಕೋಟಿ ಎಂದು ಸಿಬಿಐ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.

ಇದರ ಜತೆಗೆ, ಅಕ್ರಮ ಗಣಿಗಾರಿಕೆ ಕುರಿತು ಕೇಂದ್ರದ ಉನ್ನತಾಧಿಕಾರ ಸಮಿತಿ (ಸಿಇಸಿ) 2011ರಲ್ಲಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ವರದಿ, ಲೋಕಾಯುಕ್ತ ವರದಿ ಸೇರಿದಂತೆ ಒಟ್ಟಾರೆ 1,271 ಪುಟಗಳ ದಾಖಲೆಗಳನ್ನು ಟಪಾಲ್ ಗಣೇಶ್ ತಮ್ಮ ಪತ್ರಕ್ಕೆ ಪೂರಕವಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೀಡಿದ್ದರು. ಇಷ್ಟಾದರೂ ಟಪಾಲ್ ಗಣೇಶ್ ತಮ್ಮ ದೂರಿಗೆ ಸಂಬಂಧಿಸಿದಂತೆ ಸೂಕ್ತ ದಾಖಲೆ ನೀಡಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ತನ್ನ ವರದಿಯಲ್ಲಿ ಹೇಳಿದೆ.

ವರದಿ ಪಡೆದ ಮಾಹಿತಿ ಇಲ್ಲ: ₹884 ಕೋಟಿ ನಷ್ಟ ವಸೂಲಿಗೆ ಸಂಬಂಧಿಸಿದಂತೆ ಸಿಬಿಐ ಮತ್ತು ಎಸಿಬಿಯಿಂದ ಮಾಹಿತಿ ಸಂಗ್ರಸಬೇಕಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕರು ಅಭಿಪ್ರಾಯಪಟ್ಟಿದ್ದರು. ಈ ಅಭಿಪ್ರಾಯವನ್ನು 2025ರ ಸೆ. 25ರಂದು ಗಣಿ ಇಲಾಖೆಯ ಕಾರ್ಯದರ್ಶಿಗೆ ಸಲ್ಲಿಸಲಾಗಿತ್ತು. ಆದರೆ, ತನಿಖಾ ಸಂಸ್ಥೆಗಳಿಂದ ಮಾಹಿತಿ ಸಂಗ್ರಹವಾಗಿದೆಯೇ ಇಲ್ಲವೇ ಎಂಬುದರ ಬಗ್ಗೆ ಸದ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸರ್ಕಾರಕ್ಕೆ ಸಲ್ಲಿಸಿರುವ ತನ್ನ ವರದಿಯಲ್ಲಿ ಉಲ್ಲೇಖವನ್ನೇ ಮಾಡಿಲ್ಲ.

ಒಎಂಸಿ ಆಂಧ್ರದಲ್ಲಿ ಗಣಿ ಪಡೆದಿತ್ತು ಎಂಬುದನ್ನು ಮಾತ್ರವೇ ರಾಜ್ಯದ ಅಧಿಕಾರಿಗಳು ಗಮನಿಸಿದ್ದಾರೆ. ಆದರೆ, ಒಎಂಸಿ ಕದ್ದು ಸಾಗಿಸಿದ್ದು ಕರ್ನಾಟಕದ ಸಂಪತ್ತನ್ನು ಇದನ್ನು ಯಾಕೆ ಗಮನಿಸುತ್ತಿಲ್ಲ. ಇದನ್ನೇ ಸಿಬಿಐ ತನ್ನ ತೀರ್ಪಿನಲ್ಲಿ ಹೇಳಿದೆ
ಟಪಾಲ್ ಗಣೇಶ್, ಗಣಿ ಉದ್ಯಮಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.