ಬಳ್ಳಾರಿ: ರಾಜ್ಯದಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ‘ಮೀಸಲಾತಿ’ ಹೆಚ್ಚಳ ಮಾಡುವ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧತೆ ತೋರಬೇಕು. ಮೀಸಲಾತಿ ಹೆಚ್ಚಳವನ್ನು ಕೇಂದ್ರ ಸರ್ಕಾರವು ಸಂವಿಧಾನದ 9ನೇ ಪರಿಚ್ಛೇದದಲ್ಲಿ ಸೇರಿಸಬೇಕು. ಕೇಂದ್ರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರವು ಶೀಘ್ರವೇ ದೆಹಲಿಗೆ ಸರ್ವಪಕ್ಷ ಮುಖಂಡರ ನಿಯೋಗ ಕರೆದೊಯ್ಯಬೇಕು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಸಾಮಾಜಿಕ ನ್ಯಾಯ ಕಲ್ಪಿಸುವಲ್ಲಿ ಕೇಂದ್ರ ಸರ್ಕಾರ ಇಚ್ಛಾಶಕ್ತಿ ತೋರಬೇಕು. ರಾಜ್ಯ ಸರ್ಕಾರವೂ ಈ ಕುರಿತು ಕೇಂದ್ರದ ಮೇಲೆ ಒತ್ತಡ ಹೇರಿ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ‘ಮೀಸಲಾತಿ’ ಭಿಕ್ಷೆಯಲ್ಲ, ಅದು ಹಕ್ಕು’ ಎಂದರು.

‘ಈ ಹಿಂದೆ ಬಸವರಾಜ ಬೊಮ್ಮಾಯಿ ಸರ್ಕಾರವು ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸ್ಸು ಮಾಡಿದ್ದರೂ, ನ್ಯಾಯಾಲಯ ತಡೆ ನೀಡಿದೆ. ಕೇಂದ್ರ ಸರ್ಕಾರ ಮೀಸಲಾತಿ ಹೆಚ್ಚಳವನ್ನು 9ನೇ ಷೆಡ್ಯೂಲ್ಗೆ ಸೇರಿಸಿ ಕಾನೂನುಬದ್ಧ ಆದೇಶ ಹೊರಡಿಸಿದ್ದರೆ ಈ ಪರಿಸ್ಥಿತಿ ಉಂಟಾಗುತ್ತಿರಲಿಲ್ಲ. ಈ ಬಗ್ಗೆ ಮನವರಿಕೆ ಮಾಡಲು ಸಿಎಂ, ಡಿಸಿಎಂ ಸೇರಿದಂತೆ ಸರ್ವಪಕ್ಷ ಮುಖಂಡರ ನಿಯೋಗವನ್ನು ದೆಹಲಿಗೆ ಕರೆದೊಯ್ಯಬೇಕು’

‘ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚು ಎಸ್ಟಿ ಸಮುದಾಯದವರು, 1.25 ಕೋಟಿ ಪರಿಶಿಷ್ಟ ಜಾತಿಯವರು ಹಾಗೂ 2.25 ಕೋಟಿ ಹಿಂದುಳಿದ ವರ್ಗದವರು ಇದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಲಾಗಿದೆ. 2013ರಿಂದ ಎಸ್ಸಿಪಿ–ಟಿಎಸ್ಪಿ ಅಡಿಯಲ್ಲಿ ಅನುದಾನ ನೀಡಲು ಕಾನೂನು ಜಾರಿಗೆ ಬಂದಿದೆ. ಜಸ್ಟೀಸ್ ನಾಗಮೋಹನ್ದಾಸ್ ಸಮಿತಿಯ ವರದಿ ಸಹ ಲಭ್ಯವಿದೆ. ತಮಿಳುನಾಡಿನಲ್ಲಿ ಶೇ.69 ಮೀಸಲಾತಿ ಜಾರಿಯಲ್ಲಿದೆ’ ಎಂದು ಉಲ್ಲೇಖಿಸಿದರು.

‘ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಆದ್ಯತೆಯ ಮೇರೆಗೆ ಈ ವಿಷಯದ ಮೇಲೆ ಗಮನಹರಿಸಿ ಸಾಮಾಜಿಕ ನ್ಯಾಯ ಕಲ್ಪಿಸಬೇಕು. ಈ ಸಮುದಾಯಗಳ ಮತಗಳಿಂದ ಆಯ್ಕೆಯಾದ ಶಾಸಕರು, ಸಂಸದರು ಹಾಗೂ ಸಚಿವರು ಮೌನವಾಗಿರದೆ ಒಗ್ಗಟ್ಟಿನಿಂದ ಆಗ್ರಹಿಸಬೇಕು’ ಎಂದರು.

‘ಯಾವುದೇ ಸಮುದಾಯವನ್ನು ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರಿಸುವ ಮೊದಲು ಕುಲಶಾಸ್ತ್ರ ಅಧ್ಯಯನ ಅಗತ್ಯ. ಯಾವುದೇ ಸಮುದಾಯಕ್ಕೂ ಅನ್ಯಾಯವಾಗಬಾರದು. ಇತರ ಸಮುದಾಯಗಳಿಗೆ ಮೀಸಲಾತಿ ನೀಡುವುದಕ್ಕೆ ವಿರೋಧವಿಲ್ಲ, ಆದರೆ ಪ್ರಮಾಣ ಹೆಚ್ಚಳ ಅಗತ್ಯವಿದೆ’ ಎಂದು ಸ್ಪಷ್ಟಪಡಿಸಿದರು.

‘ಮಹಿಳಾ ಮೀಸಲಾತಿ’ ಕುರಿತು ಕೇಂದ್ರ ಸರ್ಕಾರ ಬದ್ಧತೆ ತೋರಿಸುತ್ತಿಲ್ಲ. ಕ್ಷೇತ್ರ ಪುನರ್ವಿಂಗಡಣೆ ಹೆಸರಿನಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯವಾಗುತ್ತಿದೆ. ದಕ್ಷಿಣದಲ್ಲಿ ಸ್ಥಾನಗಳ ಸಂಖ್ಯೆಯನ್ನು ಕಡಿಮೆ ಮಾಡುವ ಪ್ರಯತ್ನ ನಡೆಯುತ್ತಿದೆ’ ಎಂದು ಉಗ್ರಪ್ಪ ಆರೋಪಿಸಿದರು.

ನರಸಿಂಹಯ್ಯ, ಕೆ.ಆರ್. ರಾಜಪ್ಪ, ಚಿತ್ರದುರ್ಗ ರಾಜಣ್ಣ, ಜೋಳದರಾಶಿ ತಿಮ್ಮಪ್ಪ, ವೆಂಕಟೇಶ್ ಹೆಗಡೆ, ಕಲ್ಲುಕಂಬ ಪಂಪಾಪತಿ, ವೆಂಕಟೇಶ್ ನಾಯಕ, ಹವಂಬಾವಿ ಲೋಕೇಶ್, ಪಿ. ಜಗನ್, ಹನುಮಂತರಾಯಪ್ಪ, ಶ್ರೀರಾಮುಲು, ರಿಷ್ವಾಮಿ, ಹನುಮಂತಪ್ಪ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-25-1302796635

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.