ಬಳ್ಳಾರಿ: ‘ರಾಜ್ಯದ ಕಾಂಗ್ರೆಸ್ ಸರ್ಕಾರವು ಆಚರಿಸಿಕೊಳ್ಳುತ್ತಿರುವ ಮೂರು ವರ್ಷಗಳ ಸಾಧನಾ ಸಮಾವೇಶವು ಕೇವಲ ಸುಳ್ಳುಗಳ ಮೇಲೆ ನಿಂತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳಿನ ಮಾಲೀಕರಾಗಿದ್ದರೆ, ಡಿ.ಕೆ. ಶಿವಕುಮಾರ್ ಅವರು ಅದಕ್ಕೆ ಸಾಕ್ಷಿದಾರರಾಗಿದ್ದಾರೆ’ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಬಿ. ಶ್ರೀರಾಮುಲು ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ನೀಡುತ್ತಿದ್ದ ₹4,000 ಕಿಸಾನ್ ಸಮ್ಮಾನ್ ನೆರವು ಹಾಗೂ ರೈತ ಮಕ್ಕಳ ‘ವಿದ್ಯಾನಿಧಿ’ ಯೋಜನೆಯನ್ನು ಸರ್ಕಾರ ಸ್ಥಗಿತಗೊಳಿಸಿದೆ. ಬಿತ್ತನೆ ಬೀಜಗಳ ಬೆಲೆಯನ್ನು ಶೇ.60 ರಷ್ಟು ಹೆಚ್ಚಿಸಿ ರೈತರಿಗೆ ಹೊರೆ ಹೊರಿಸಲಾಗಿದೆ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದು ಈ ಸರ್ಕಾರದ ‘ಆರನೇ ಗ್ಯಾರಂಟಿ’ಯಂತಿದೆ’ ಎಂದು ಲೇವಡಿ ಮಾಡಿದರು.

ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಆರೋಪಿಸಿದ ಅವರು, ‘ಹಾಲು ಉತ್ಪಾದಕರಿಗೆ ಪಾವತಿಸಬೇಕಾದ ₹700 ಕೋಟಿ ಬಾಕಿ ಉಳಿಸಿಕೊಳ್ಳಲಾಗಿದೆ. 'ಡಿ' ಗ್ರೂಪ್ ನೌಕರರಿಗೆ ಸಂಬಳ ನೀಡಲು ಹಣವಿಲ್ಲದ ಸರ್ಕಾರ, ಸಾಧನಾ ಸಮಾವೇಶಗಳ ಹೆಸರಿನಲ್ಲಿ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ. ಸಾರಿಗೆ ಇಲಾಖೆಯು ದುರಸ್ತಿಗೆ ಹಣವಿಲ್ಲದೆ ಸೊರಗುತ್ತಿದೆ’ ಎಂದು ವ್ಯಂಗ್ಯವಾಡಿದರು.

‘ವಾಲ್ಮೀಕಿ ನಿಗಮ ಮತ್ತು ಅಬಕಾರಿ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಮಾಡಲಾಗಿದೆ. ಈ ಹಗರಣ ಮುಚ್ಚಿಹಾಕಲು ಸರ್ಕಾರ ಸಮಾವೇಶಗಳ ನಾಟಕವಾಡುತ್ತಿದೆ. ಒಂದು ವರ್ಗದ ಓಲೈಕೆಗಾಗಿ ₹10,000 ಕೋಟಿ ಅನುದಾನ ನೀಡುವುದು ಮತ್ತು ಹಿಜಾಬ್ನಂತಹ ವಿವಾದಗಳನ್ನು ಮುನ್ನೆಲೆಗೆ ತರುವ ಮೂಲಕ ಸರ್ಕಾರ ಸಮಾಜದಲ್ಲಿ ಒಡಕು ಮೂಡಿಸುತ್ತಿದೆ’ ಎಂದು ದೂರಿದರು.

ಅಭಿವೃದ್ಧಿ ವಿಚಾರದಲ್ಲಿ ಈ ಸರ್ಕಾರ 'ಶೂನ್ಯ' ಸಾಧನೆ ಮಾಡಿದ್ದು, ಕೇವಲ ಪ್ರಚಾರಕ್ಕಾಗಿ ಜಾಹೀರಾತು ನೀಡುತ್ತಿದೆ ಎಂದು ಅವರು ಗುಡುಗಿದರು.

ಈ ಸಂದರ್ಭದಲ್ಲಿ ಪಾಲಿಕೆ ವಿರೋಧ ಪಕ್ಷದ ನಾಯಕ ಶ್ರೀನಿವಾಸ್ ಮೊತ್ಕರ್, ಪಾಲಿಕೆ ಸದಸ್ಯರಾದ ಹನುಮಂತಪ್ಪ, ಹನುಮಂತ, ಗೋವಿಂದರಾಜುಲು, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ, ಬಿಜೆಪಿ ಮುಖಂಡರಾದ ಗುರುಲಿಂಗಗೌಡ, ವೆಂಕಟರಾಮಣ, ಮಾರುತಿ ಪ್ರಸಾದ್, ಸುಗುಣ ಸೇರಿದಂತೆ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-25-903908670

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.