ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆನ್‌ಲೈನ್‌ ಗೇಮ್ ಕಡಿವಾಣ: ಅಮಿತ್ ಶಾಗೆ ಪತ್ರ

Published 1 ಸೆಪ್ಟೆಂಬರ್ 2024, 16:26 IST
Last Updated 1 ಸೆಪ್ಟೆಂಬರ್ 2024, 16:26 IST
ಅಕ್ಷರ ಗಾತ್ರ

ಬೆಂಗಳೂರು: ಆನ್‌ಲೈನ್‌ ಗೇಮ್‌ಗಳಿಗೆ ಕಡಿವಾಣ ಹಾಕಬೇಕು ಎಂದು ಕೇಂದ್ರ ಸಚಿವ ಅಮಿತ್ ಶಾಗೆ ಪತ್ರ ಬರೆದಿರುವ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಭೇಟಿಗೆ ಅವಕಾಶ ನೀಡುವಂತೆಯೂ ಮನವಿ ಮಾಡಿದ್ದಾರೆ.

‘ಆನ್‌ಲೈನ್‌ ಗೇಮ್‌ಗಳ ಜಾಲಕ್ಕೆ ಸಿಲುಕಿ ಮಕ್ಕಳು ಮತ್ತು ಯುವಕರು ಹಣ ಕಳೆದುಕೊಳ್ಳುವುದನ್ನು ತಪ್ಪಿಸಲು ಕ್ರಮ ತೆಗೆದುಕೊಳ್ಳಿ. ಇಂತಹ ಆಟಗಳಲ್ಲಿ ಜೂಜಿಗೆ ಹಣ ಇಟ್ಟು ಹಲವು ಕುಟುಂಬಗಳು ಬೀದಿಗೆ ಬಂದಿವೆ. ಆದರೆ, ಅಂತಹ ಗೇಮ್‌ಗಳು ಮತ್ತು ಆ್ಯಪ್‌ಗಳ ಮಾಲೀಕರು ಲಾಭ ಮಾಡಿಕೊಂಡು ಐಷಾರಾಮ ಜೀವನ ನಡೆಸುತ್ತಿದ್ದಾರೆ. ಇದನ್ನು ತಪ್ಪಿಸುವ ಅವಶ್ಯಕತೆ ಇದೆ’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಜತೆಗೆ, ‘ಈ ವಿಷಯ ಮಾತ್ರವಲ್ಲದೇ, ರಾಜ್ಯದಲ್ಲಿನ ಈಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಬೇಕಿದೆ. ಹೀಗಾಗಿ ನಿಮ್ಮನ್ನು ಭೇಟಿಯಾಗಬೇಕಿದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT