ಬೆಂಗಳೂರು: ‘ಹೋಳಿಗೆ ಸೇರಿ ವಿವಿಧ ಆಹಾರಗಳ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಹಾಳೆ ಬಳಕೆಗೆ ಕಡಿವಾಣ ಹಾಕಲಾಗುವುದು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಬಗ್ಗೆ ‘ಎಕ್ಸ್’ ಮಾಡಿರುವ ಅವರು, ‘ನಮ್ಮ ನೆಚ್ಚಿನ ತಿನಿಸುಗಳಾದ ಹೋಳಿಗೆ, ಇಡ್ಲಿ ಮೊದಲಾದವುಗಳನ್ನು ಕೆಲವೆಡೆ ಪ್ಲಾಸ್ಟಿಕ್ ಹಾಳೆ ಬಳಸಿ ತಯಾರಿಸಲಾಗುತ್ತಿದೆ. ಬಿಸಿ ತಿನಿಸುಗಳ ಮೇಲೆ ಪ್ಲಾಸ್ಟಿಕ್ ಹಾಳೆ ಬಳಸುವುದರಿಂದ ಹಾನಿಕಾರಕ ರಾಸಾಯನಿಕಗಳು ಬಿಡುಗಡೆಯಾಗುವ ಅಪಾಯವಿದೆ. ಇದು ನಮ್ಮ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ’ ಎಂದು ಹೇಳಿದ್ದಾರೆ.

‘ಆರೋಗ್ಯಕರ ನಾಳೆಗಾಗಿ, ಪ್ಲಾಸ್ಟಿಕ್ ಮುಕ್ತ ಆಹಾರ ತಯಾರಿಕೆಗೆ ಆದ್ಯತೆ ನೀಡಬೇಕು. ಪ್ಲಾಸ್ಟಿಕ್ಗೆ ಪರ್ಯಾಯವನ್ನು ಆಯ್ಕೆ ಮಾಡಿಕೊಳ್ಳಬೇಕು. ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಲು ನಮ್ಮ ಸರ್ಕಾರ ಕ್ರಮ ವಹಿಸಲಿದೆ. ಸಾರ್ವಜನಿಕರು ಈ ಬಗ್ಗೆ ಜಾಗೃತಿ ವಹಿಸಬೇಕು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.