ನವದೆಹಲಿ: ವಯನಾಡಿನ ಮಾಜಿ ಹಾಗೂ ಹಾಲಿ ಸಂಸದರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಡಕ್ಕೆ ಮಣಿದಿರುವ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಬಂಡಿಪುರ ಅಭಯಾರಣ್ಯದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾಗಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದರು.

ಲೋಕಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಸರ್ಕಾರದ ತೀರ್ಮಾನದಿಂದಾಗಿ ಬಂಡಿಪುರದ ಸೂಕ್ಷ್ಮ ಪರಿಸರ ವ್ಯವಸ್ಥೆ ಮೇಲೆ ಪ್ರಹಾರ ಮಾಡಿದಂತಾಗುತ್ತದೆ. ಕೇಂದ್ರ ಅರಣ್ಯ ಸಚಿವರು ಈ ವಿಷಯದಲ್ಲಿ ಮಧ್ಯ ಪ್ರವೇಶಿಸಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಕೋರಿದರು.

ತೆಲಂಗಾಣದಲ್ಲಿ ರಿಯಲ್ ಎಸ್ಟೇಟ್ ಮಾಫಿಯಾದ ಆಣತಿಯಂತೆ ಕಾರ್ಯನಿರ್ವಹಿಸುತ್ತಿರುವ ಕಾಂಗ್ರೆಸ್ ಸರ್ಕಾರವು ಮಧ್ಯರಾತ್ರಿಯ ಕಾರ್ಯಾಚರಣೆ ನಡೆಸಿ ಕಾಂಚ ಗಚಿಬೌಲಿಯಲ್ಲಿ 400 ಎಕರೆ ಅರಣ್ಯ ಭೂಮಿಯನ್ನು ನಾಶ ಮಾಡಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.