ಬೆಂಗಳೂರು: ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಶಾಸಕ ರೋಷನ್ ಬೇಗ್ ಮತ್ತು ಹಾಲಿ ಶಾಸಕ ಜಮೀರ್ ಅಹಮ್ಮದ್ ಖಾನ್ ಟ್ವೀಟ್ ವಾರ್ ನಡೆದಿದೆ. ಕಾಂಗ್ರೆಸ್ ಹಾಗೂ ಎಸ್‌ಡಿಪಿಐ ಗಲಭೆಗೆ ಕಾರಣ ಎಂಬ ರೋಷನ್ ಬೇಗ್ ಆರೋಪಕ್ಕೆ ಜಮೀರ್ ಅಹಮ್ಮದ್ ಖಾನ್ ಕಿಡಿಕಾರಿದ್ದಾರೆ.

‘ಅಲ್ಪಸಂಖ್ಯಾತ ಸಮುದಾಯದ ಬಡ ವರ್ಗಗಳನ್ನು ಎಸ್‌ಡಿಪಿಐ ಹಾಗೂ ಕಾಂಗ್ರೆಸ್‌ನಿಂದ ಶೋಷಿಸಬಾರದು. ಕಾಂಗ್ರೆಸ್ ಕಳೆದ 10 ವರ್ಷಗಳಿಂದ ಎಸ್‌ಡಿಪಿಐಗೆ ಬೆಂಬಲವಾಗಿ ಕೆಲಸ ಮಾಡುತ್ತಿದೆ. ಈಗ ಅವರಿಗೆ ತಮ್ಮ ಸ್ವಂತ ಶಾಸಕರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಈ ಘಟನೆಗೆ ಕಾಂಗ್ರೆಸ್ ಕಾರಣ, ಬೆಂಗಳೂರು ಗಲಭೆಗೆ ಕಾಂಗ್ರೆಸ್ ಹೊಣೆ ಹೊರಬೇಕು’ ಎಂದು ಬೇಗ್ ಆರೋಪಿಸಿದ್ದರು.

ಇದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಜಮೀರ್ ಅಹಮ್ಮದ್ ಖಾನ್, ‘ರೋಷನ್ ಬೇಗ್ ಕಾಂಗ್ರೆಸ್ ಬಗ್ಗೆ ಸುಳ್ಳು ಆರೋಪ ಮಾಡಿ ಸಂಘಿ ನಿಷ್ಠೆ ಸಾಬೀತು ಮಾಡುವ ಬದಲು ಈಶ್ವರಪ್ಪನವರು ಹೇಳಿದಂತೆ ಬಿಜೆಪಿ ಕಚೇರಿ ಕಸ ಗುಡಿಸಿ, ನಿಮ್ಮ ಹಿರಿತನಕ್ಕೆ ಗೌರವ ಕೊಟ್ಟು 10 ವರ್ಷದ ಷರತ್ತು ಸಡಿಲಿಸಿ 2023ರ ಚುನಾವಣೆಯಲ್ಲಾದರೂ ಬಿಜೆಪಿ ಟಿಕೆಟ್ ನೀಡಬಹುದು. ಈ ದಿಸೆಯಲ್ಲಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ’ ಎಂದಿದ್ದಾರೆ.

‘ಪ್ರವಾದಿಯವರನ್ನು ಅವಹೇಳನ ಮಾಡಿರುವ ನವೀನ್ ಎಂಬ ಆರೋಪಿಯ ಕುಕೃತ್ಯವನ್ನು ಕನಿಷ್ಠ ಖಂಡಿಸುವ ಧೈರ್ಯ ತೋರದ ರೋಷನ್ ಬೇಗ್ ಅವರು ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಸಂಬಂಧದ ಕತೆ ಹೆಣೆಯುತ್ತಿರುವುದು ಅವರ ಆತ್ಮವಂಚಕ ನಡವಳಿಕೆಗೆ ಸರಿಯಾಗಿ ಹೊಂದಿಕೊಳ್ಳುತ್ತಿದೆ’ ಎಂದೂ ಜಮೀರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಡಿಜೆಹಳ್ಳಿ ಗಲಭೆ ಬಗ್ಗೆ ಇಲ್ಲಿಯವರೆಗೆ ಮೌನವಹಿಸಿದ್ದ ಬೇಗ್ ಅವರು ಇದ್ದಕ್ಕಿದ್ದಂತೆ, ಎಸ್‌ಡಿಪಿಐಯಿಂದ ಅಂತರ ಕಾಯ್ದುಕೊಳ್ಳಲು ಪ್ರಯತ್ನಿಸುತ್ತಿರುವುದು ಮತ್ತು ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವುದನ್ನು ಕಂಡಾಗ ಪೊಲೀಸರ ತನಿಖೆಯ ಸುಳಿವು ಅವರಿಗೆ ಸಿಕ್ಕ ಹಾಗೆ ಕಾಣುತ್ತಿದೆ.’

‘ಶಿವಾಜಿನಗರದಲ್ಲಿ ಬೇಗ್ ಅವರು ಸ್ಪರ್ಧಿಸುತ್ತಿದ್ದಾಗ ಎಂದೂ ಸ್ಪರ್ಧಿಸದಿದ್ದ ಎಸ್‌ಡಿಪಿಐ ಇತ್ತೀಚಿನ ಶಿವಾಜಿ ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಕಣಕ್ಕಿಳಿದದ್ದು ಯಾಕೆ? ಕಾಂಗ್ರೆಸ್ ಬೆಂಬಲಿಸುವ ಮುಸ್ಲಿ ಮತಗಳನ್ನು ವಿಭಜಿಸುವ ದುರುದ್ದೇಶದಿಂದ ಎಸ್‌ಡಿಪಿಐ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು ಯಾರು ಎನ್ನುವುದನ್ನು ಬೇಗ್ ಸಾಹೇಬರು ತಿಳಿಸಬೇಕು’ ಎಂದೂ ಜಮೀರ್ ತರಾಟೆಗೆ ತೆಗೆದುಕೊಂಡಿದ್ದಾರೆ.

‘ಮೂರು ದಶಕಗಳಿಗಿಂತ ಹೆಚ್ಚು ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದು ಮುಸ್ಲಿಮರ ಬಡತನ, ಅನಕ್ಷರತೆ, ನಿರುದ್ಯೋಗದಂಥ ಮೂಲಭೂತ ಸಮಸ್ಯೆಗಳ ಬಗ್ಗೆ ಎಂದೂ ತಲೆಕೆಡಿಸಿಕೊಳ್ಳದೆ, ಅಮಾಯಕ ಮುಸ್ಲಿಮರನ್ನು ರಾಜಕೀಯ ಸ್ವಾರ್ಥಕ್ಕಷ್ಟೇ ಬಳಸಿಕೊಂಡಿದ್ದ ರೋಷನ್ ಬೇಗ್ ಅವರು ಈಗ ಮುಸ್ಲಿಮರ ಪರ ಕಣ್ಣೀರು ಹಾಕುತ್ತಿರುವುದು ತಮಾಷೆಯಾಗಿದೆ’ ಎಂದೂ ಟ್ವೀಟ್‌ನಲ್ಲಿ ಕಿಡಿಕಾರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.