ಉಡುಪಿ: ಡಿಜಿ ಹಳ್ಳಿ ಹಾಗೂ ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಗಲಭೆಯನ್ನು ಹತೋಟಿಗೆ ತರಲು ಕೊನೆಯ ಅಸ್ತ್ರವಾಗಿ ಗೋಲಿಬಾರ್ ಮಾಡಬೇಕಾಯಿತು. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಉಡುಪಿಯಲ್ಲಿ ಬುಧವಾರ ಮಾತನಾಡಿದ ಸಚಿವರು ‘ಗಲಭೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಪೊಲೀಸರಿಗೂ ಗಾಯಗಳಾಗಿವೆ. ಗಲಭೆಯಲ್ಲಿ ಭಾಗಿಯಾದ 110 ಜನರನ್ನು ಬಂಧಿಸಿದ್ದು, ಮತ್ತಷ್ಟು ಜನರನ್ನು ಬಂಧಿಸಲಿದ್ದೇವೆ ಎಂದರು.

ಹೈದರಾಬಾದ್ ಹಾಗೂ ಚೆನ್ನೈನಿಂದ 6 ಸಿಆರ್‌ಪಿಎಫ್ ತುಕಡಿಗಳನ್ನು ಬೆಂಗಳೂರಿಗೆ ಕರೆಸಲಾಗಿದೆ. ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್, ಗರುಡ ಪಡೆಗಳನ್ನು ಕೂಡ ನಿಯೋಜಿಸಲಾಗಿದೆ. ಗಲಭೆಯ ಹಿಂದೆ ಯಾರಿದ್ದಾರೆ ಎಂಬ ಕೂಲಂಕಷ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

ಡಿಜಿ ಹಳ್ಳಿ ಪೊಲೀಸ್ ಸ್ಟೇಷನ್ ಬಳಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಗಲಭೆಯ ದೃಶ್ಯಗಳು ಸೆರೆಯಾಗಿದ್ದು, ಆರೋಪಿಗಳ ಮಾಹಿತಿ ಕಲೆ ಹಾಕಲಾಗುತ್ತಿದೆ. ಫೇಸ್ ಬುಕ್‌ನಲ್ಲಿ ಗಲಭೆಗೆ ಕರೆಕೊಟ್ಟು ದಾಳಿ ನಡೆಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸುವ ಷಡ್ಯಂತ್ರ ಇದಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

ಬೆಂಗಳೂರು ತಲುಪಿದ ತಕ್ಷಣ ಹಿರಿಯ ಅಧಿಕಾರಿಗಳ ಜತೆ ಸಭೆ ನಡಸಿ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ಇನ್ನಷ್ಟು ಸುದ್ದಿ
ಡಿ.ಜೆ.ಹಳ್ಳಿ ಗಲಭೆ | ಗುಂಡೇಟಿಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆ
ಡಿ.ಜೆ.ಹಳ್ಳಿ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಬಿಎಸ್ವೈ ಆದೇಶ
ಅವಹೇಳನಕಾರಿ ಪೋಸ್ಟ್: ಆರೋಪಿ ನವೀನ್ ಬಂಧನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.